ಯುಜಿಸಿ ನಿಯಮ ಜಾರಿಗೆ ಒತ್ತಾಯ

ಚಾಮರಾಜನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಉಮೇಶ್ ಕುದರ್, ಸಿ.ಎಂ.ಕೃಷ್ಣಮೂರ್ತಿ, ಸಿ.ಕೆ.ಮಂಜುನಾಥ್, ಗಣೇಶ್ ಪ್ರಸಾದ್, ಮಂಜು ಕೋಡಿಉಗನೆ, ಶಿವರಾಜು, ಕಾಗಲವಾಡಿ ಶಿವಸ್ವಾಮಿ, ಎಸ್.ಪಿ.ಮಹೇಶ್, ವಾಸು ಹೊಂಡರಬಾಳು, ಸುನೀಲ್ ಇನ್ನಿತರರಿದ್ದರು.
ಚಾಮರಾಜನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಉಮೇಶ್ ಕುದರ್, ಸಿ.ಎಂ.ಕೃಷ್ಣಮೂರ್ತಿ, ಸಿ.ಕೆ.ಮಂಜುನಾಥ್, ಗಣೇಶ್ ಪ್ರಸಾದ್, ಮಂಜು ಕೋಡಿಉಗನೆ, ಶಿವರಾಜು, ಕಾಗಲವಾಡಿ ಶಿವಸ್ವಾಮಿ, ಎಸ್.ಪಿ.ಮಹೇಶ್, ವಾಸು ಹೊಂಡರಬಾಳು, ಸುನೀಲ್ ಇನ್ನಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • UGC
ಚಾಮರಾಜನಗರ: ದೇಶದ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್ಸಿ, ಎಸ್ಟಿ, ಒಬಿಸಿ, ಅಂಗವಿಕಲರು ಹಾಗೂ ವಿದ್ಯಾರ್ಥಿನಿಯರಿಗೆ ರಕ್ಷಣೆ ನೀಡುವಂತಹ ಯುಜಿಸಿ ನಿಯಮವನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ತಾಲೂಕು ಡಾ.ಬಿ.ಆರ್.ಅಂಬೇಡ್ಕರ್ ಮಹಾಸಭಾ, ಅಹಿಂದ ಸಂಘಟನೆಗಳ ಒಕ್ಕೂಟ, ಕಾನ್ಶಿರಾಂ ವಿದ್ಯಾರ್ಥಿ ಸಂಘಟನೆ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮಾರ್ಗವಾಗಿ ಜಿಲ್ಲಾಡಳಿತ ಭವನಕ್ಕೆ ಸಾಗಿ ಕೆಲಕಾಲ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಮಹಾಸಭಾ ಅಧ್ಯಕ್ಷ ಉಮೇಶ್ ಕುದರ್ ಮಾತನಾಡಿ, ದೇಶದಲ್ಲಿರುವ ಬಹುಪಾಲು ವಿಶ್ವವಿದ್ಯಾಲಯಗಳಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಹಾಗೂ ವಿದ್ಯಾರ್ಥಿನಿಯರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಲಾಗುತ್ತಿದೆ. ಇದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಯುಜಿಸಿ ನಿಯಮಗಳನ್ನು ಜಾರಿಗೊಳಿಸಿತ್ತು. ಆದರೆ ಸುಪ್ರೀಂ ಕೋರ್ಟ್ ಎಸ್ಸಿ, ಎಸ್ಟಿ, ಒಬಿಸಿಗಳಿಗೆ ರಕ್ಷಣೆ ನೀಡುವ ಕಾನೂನಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ಯುಜಿಸಿ ಕಾನೂನನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಮಹಾಸಭಾ ಗೌರವಾಧ್ಯಕ್ಷ ಸಿ.ಎಂ. ಕೃಷ್ಣಮೂರ್ತಿ ಮಾತನಾಡಿ, ದೇಶದ ಪ್ರತಿಯೊಂದು ಕ್ಷೇತ್ರದಲ್ಲೂ ಜಾತಿ ವ್ಯವಸ್ಥೆ ತಾಂಡವಾಡುತ್ತಿದೆ. ವಿಶ್ವವಿದ್ಯಾಲಯಗಳಲ್ಲಿ ಇರುವ ಜಾತಿ ವ್ಯವಸ್ಥೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯುಜಿಸಿ ಕಾಯ್ದೆ ಅತ್ಯಂತ ಅಗತ್ಯವಾಗಿದೆ. ಕೇಂದ್ರ ಬಿಜೆಪಿ ಸರ್ಕಾರ ಮಧ್ಯೆ ಪ್ರವೇಶಿಸಿ ಯುಜಿಸಿ-2026 ಕಾನೂನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ವಕೀಲ ಮಹೇಂದ್ರ ಮಾತನಾಡಿ, ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಸಮಿತಿ ಸ್ಥಾಪನೆ ಮಾಡುವುದರಿಂದ ವಿದ್ಯಾರ್ಥಿಗಳ ಕುಂದುಕೊರತೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ. ಯುಜಿಸಿ ಜಾರಿಗೊಳಿಸುವಂತೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಸಂಘಟಿತರಾಗಬೇಕಿದೆ ಎಂದರು.
ಪ್ರತಿಭಟನೆಯಲ್ಲಿ ಮಹಾಸಭಾ ಕಾರ್ಯಾಧ್ಯಕ್ಷ ಸಿ.ಕೆ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಗಣೇಶ್ ಪ್ರಸಾದ್, ಮಂಜು ಕೋಡಿಉಗನೆ, ಶಿವರಾಜು, ಕಾಗಲವಾಡಿ ಶಿವಸ್ವಾಮಿ, ಎಸ್.ಪಿ.ಮಹೇಶ್, ಕಾನ್ಶಿರಾಂ ವಿದ್ಯಾರ್ಥಿ ಸಂಘದ ವಾಸು ಹೊಂಡರಬಾಳು, ಸುನೀಲ್, ದೇವಾಲಪುರ ಶಿವಣ್ಣ, ದಡದಹಳ್ಳಿ ಶಂಕರ್ ಹಾಗೂ ಇತರರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net