ಗುಂಡ್ಲುಪೇಟೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ವಿದ್ಯುತ್ ದೀಪಗಳಿಲ್ಲದೆ ಅನಕೂಲವಾಗುತ್ತಿರುವ ಬಗ್ಗೆ ಕರ್ನಾಟಕ ಕಾವಲು ಪಡೆ ಸದಸ್ಯರು ತಹಸೀಲ್ದಾರ್ ಎಂ.ಎಸ್.ತನ್ಮಯಿ ಅವರಿಗೆ ಮನವಿ ಸಲ್ಲಿಸಿದರು. ಅಬ್ದುಲ್ ಮಾಲೀಕ್, ರಾಮೇಗೌಡ. ಎಸ್.ಮುಬಾರಕ್, ಶಿವಕುಮಾರ್, ಸಾದಿಕ್ ಪಾಷ ಇದ್ದರು.
Published on:
Copied
Follow Us
ಗುಂಡ್ಲುಪೇಟೆ:ಕರ್ನಾಟಕ ಕಾವಲು ಪಡೆ ವತಿಯಿಂದ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ವಿದ್ಯುತ್ ದೀಪಗಳಿಲ್ಲದೆ ಅನನುಕೂಲವಾಗುತ್ತಿರುವ ಬಗ್ಗೆ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಬಸವೇಶ್ವರ ವೃತ್ತದ ಬಳಿ ಸಮಾವೇಶಗೊಂಡು ಪುರಸಭೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
ನಂತರ ತಾಲೂಕು ಕಚೇರಿಗೆ ತೆರಳಿ ಊಟಿ ಮೈಸೂರು ರಸ್ತೆ ಹಾಗೂ ಸುಲ್ತಾನ್ ಬತ್ತೇರಿ ರಸ್ತೆಯ ಮಧ್ಯ ಭಾಗದಲ್ಲಿರುವ ವಿದ್ಯುತ್ ದೀಪಗಳು ದುರಸ್ತಿ ಆಗಬೇಕಿವೆ. ಇದರಿಂದ ಹಲವಾರು ಪಾದಚಾರಿಗಳಿಗೆ ಅಪಘಾತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾವಲು ಪಡೆಯ ತಾಲೂಕು ಅಧ್ಯಕ್ಷ ಎ.ಅಬ್ದುಲ್ ಮಾಲಿಕ್ ಮಾತನಾಡಿ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಕಿಡಿಕಾರಿ ಕೂಡಲೇ ವಿದ್ಯುತ್ ದೀಪಗಳನ್ನು ಸರಿಪಡಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ನಂತರ ತಹಸೀಲ್ದಾರ್ ಎಂ.ಎಸ್.ತನ್ಮಯಿ ಅವರಿಗೆ ಮನವಿ ಸಲ್ಲಿಸಿದರು.
ಕಾವಲು ಪಡೆಯ ಗೌರವಾಧ್ಯಕ್ಷ ರಾಮೇಗೌಡ, ಕಾರ್ಯದರ್ಶಿ ಎಸ್.ಮುಬಾರಕ್, ಉಪಾಧ್ಯಕ್ಷ ಶಿವಕುಮಾರ್, ಟೌನ್ ಉಪಾಧ್ಯಕ್ಷ ಸಾದಿಕ್ ಪಾಷ ಸೇರಿದಂತೆ ಹಲವರು ಇದ್ದರು.