ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ

ಯಳಂದೂರು ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ತಮಿಳುನಾಡಿಗೆ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಪ್ರತಿಭಟನೆ ನಡೆಸಿದರು. ಬಿ.ಮಹದೇವಸ್ವಾಮಿ, ಇಸ್ಮಾಯಿಲ್, ಪುಟ್ಟಸ್ವಾಮಿ, ನಿಂಗರಾಜು, ಇರ್ಫಾನ್ ಪಾಷ ಇತರರು ಇದ್ದರು.
ಯಳಂದೂರು ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ತಮಿಳುನಾಡಿಗೆ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಪ್ರತಿಭಟನೆ ನಡೆಸಿದರು. ಬಿ.ಮಹದೇವಸ್ವಾಮಿ, ಇಸ್ಮಾಯಿಲ್, ಪುಟ್ಟಸ್ವಾಮಿ, ನಿಂಗರಾಜು, ಇರ್ಫಾನ್ ಪಾಷ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕರವೇ ಕಾರ್ಯಕರ್ತರ ಪ್ರತಿಭಟನೆ

ಯಳಂದೂರು:

ತಮಿಳುನಾಡಿಗೆ ನಿತ್ಯ ಹರಿಸುತ್ತಿರುವ ನೀರನ್ನು ಕೂಡಲೇ ನಿಲ್ಲಿಸಬೇಕು. ಈ ಭಾಗದ ರೈತರ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಸದಸ್ಯರು ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಕರವೇ ತಾಲೂಕು ಅಧ್ಯಕ್ಷ ಬಿ.ಮಹದೇವಸ್ವಾಮಿ ಮಾತನಾಡಿ, ಈ ಬಾರಿ ರಾಜ್ಯದಲ್ಲಿ ಮಳೆ ಕೈಕೊಟ್ಟಿದೆ. ಇತ್ತೀಚೆಗೆ ಕೆಲವೆಡೆ ಮಳೆಯಾಗುತ್ತಿದೆ. ಕಬಿನಿ ಹಾಗೂ ಕಾವೇರಿ ನೀರನ್ನು ಆಶ್ರಯಿಸಿರುವ ರೈತರು ನೀರಿಲ್ಲದೆ ಜಮೀನು ಹಸನು ಮಾಡಿಕೊಂಡು ನೀರಿಗಾಗಿ ಕಾಯುತ್ತಿದ್ದಾರೆ. ಆದರೆ ಕಾವೇರಿಯಿಂದ ತಮಿಳುನಾಡಿಗೆ ರಾಜ್ಯ ಸರ್ಕಾರ ನೀರನ್ನು ಬಿಡುತ್ತಿದೆ.
ಹಾಗಾಗಿ ರೈತರ ಹಿತವನ್ನು ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನಮ್ಮ ರಾಜ್ಯದ ಎಲ್ಲ ಜಲಾಶಯಗಳು ತುಂಬಬೇಕು. ಇಲ್ಲಿನ ಕೆರೆ ಕಟ್ಟೆಗಳಿಗೆ ಕಾಲುವೆ ಮೂಲಕ ನೀರು ತುಂಬಿಸಬೇಕು. ರೈತರ ಜಮೀನಿಗೆ ನೀರನ್ನು ಬಿಟ್ಟು ಇನ್ನು ಹೆಚ್ಚು ನೀರು ಬಂದಲ್ಲಿ ತಮಿಳುನಾಡಿಗೆ ಹರಿಸಬೇಕು ಎಂದು ಆಗ್ರಹಿಸಿದರು.
ಪಟ್ಟಣದ ಬಸ್ ನಿಲ್ದಾಣ, ದೊಡ್ಡ ಅಂಗಡಿ ಬೀದಿ, ಬಳೆಪೇಟೆ, ಕೆ.ಕೆ.ರಸ್ತೆಯ ಮೂಲಕ ಸಾಗಿದ ಪ್ರತಿಭಟನಾಕಾರರು ಬಳಿಕ ತಹಸೀಲ್ದಾರ್ ಎಸ್.ಎಲ್.ನಯನಾ ಅವರಿಗೆ ಮನವಿ ಸಲ್ಲಿಸಿದರು.
ಕರವೇ ತಾಲೂಕು ಉಪಾಧ್ಯಕ್ಷ ಇಸ್ಮಾಯಿಲ್, ಗೌರವಾಧ್ಯಕ್ಷ ಪುಟ್ಟಸ್ವಾಮಿ, ನಿಂಗರಾಜು, ಸಹ ಸಂಚಾಲಕ ಇರ್ಫಾನ್ ಪಾಷ, ಕಾರ್ಯದರ್ಶಿ ಕೌಶಿಕ್‌ಬೇಗ್, ಪ್ರಧಾನ ಕಾರ್ಯದರ್ಶಿ ಮುದಸ್ಸೀರ್, ಬಿ. ನವೀನ್, ನಯಾಜ್, ಪರಶಿವಮೂರ್ತಿ, ಮಹಿಳಾ ಘಟಕದ ಅಧ್ಯಕ್ಷೆ ಮಾನಸಾ ರುಕ್ಮಿಣಿ, ಗೌರವಾಧ್ಯಕ್ಷೆ ಪ್ರೇಮಾ, ರತ್ನಮ್ಮ, ಮಹದೇವಸ್ವಾಮಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net