ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸಲು ಒತ್ತಾಯ

ಗುಂಡ್ಲುಪೇಟೆ ಸಾರಿಗೆ ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ಸಂಘಟನೆಯ ಸದಸ್ಯರು ಸಾರಿಗೆ ಅಧಿಕಾರಿಗಳಿಗೆ ಮನವಿ ಪತ್ರ ನೀಡಿದರು. ಎಸ್.ಈಶ್ವರ್, ಕೃಷ್ಣನಾಯಕ್, ಪುಟ್ಟಮ್ಮ, ಶಿವಕುಮಾರ್, ಅನ್ಸರ್ ಇದ್ದರು.
ಗುಂಡ್ಲುಪೇಟೆ ಸಾರಿಗೆ ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ಸಂಘಟನೆಯ ಸದಸ್ಯರು ಸಾರಿಗೆ ಅಧಿಕಾರಿಗಳಿಗೆ ಮನವಿ ಪತ್ರ ನೀಡಿದರು. ಎಸ್.ಈಶ್ವರ್, ಕೃಷ್ಣನಾಯಕ್, ಪುಟ್ಟಮ್ಮ, ಶಿವಕುಮಾರ್, ಅನ್ಸರ್ ಇದ್ದರು.
Published on
ಗುಂಡ್ಲುಪೇಟೆ: ಸಾರಿಗೆ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಕಲ್ಪಿಸುವಂತೆ ಜಯ ಕರ್ನಾಟಕ ರಕ್ಷಣಾ ಸೇನೆ ಸಂಘಟನೆ ಸದಸ್ಯರು ಸಾರಿಗೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಎಸ್.ಈಶ್ವರ್ ನೇತೃತ್ವದಲ್ಲಿ ಪಟ್ಟಣದ ಸಾರಿಗೆ ಘಟಕದಲ್ಲಿ ವ್ಯವಸ್ಥಾಪಕ ಕೃಷ್ಣನಾಯಕ್ ಅವರನ್ನು ಭೇಟಿ ಮಾಡಿದ ಕಾರ್ಯಕರ್ತರು ಎರಡು ರಾಜ್ಯಗಳ ಗಡಿಯಲ್ಲಿರುವ ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯಗಳಿಲ್ಲ. ಬಸ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದೆ ನಿರ್ಲಕ್ಷೃ ಮಾಡಲಾಗುತ್ತಿದೆ. ಎಲ್ಲೆಂದರಲ್ಲಿ ಬಸ್‌ಗಳು ಕೆಟ್ಟು ನಿಲ್ಲುತ್ತಿದ್ದು ಪ್ರಯಾಣಿಕರು ಆತಂಕದಿಂದಲೇ ಪ್ರಯಾಣಿಸುತ್ತಿದ್ದಾರೆ. ನಿಲ್ದಾಣದಲ್ಲಿ ಪ್ರಯಾಣಿಕರಿಗಿಂತ ಪುಂಡರೇ ಹೆಚ್ಚಾಗಿದ್ದು ಶಾಲಾ-ಕಾಲೇಜುಗಳಿಗೆ ಹೋಗುವ ಹೆಣ್ಣು ಮಕ್ಕಳಿಗೆ ಕಿರಿಕಿರಿ ಮಾಡುತ್ತಿದ್ದಾರೆ ಎಂದು ದೂರಿದರು.
ಗ್ರಾಮಾಂತರ ಪ್ರದೇಶಗಳಿಗೆ ಸಮರ್ಪಕ ಬಸ್ ಸಂಚಾರವಿಲ್ಲದೆ ಜನರು ಗಂಟೆ ಗಟ್ಟಲೆ ಕಾಯುವಂತಾಗಿದೆ. ಜಿಲ್ಲಾ ಕೇಂದ್ರಕ್ಕೂ ಬಸ್‌ಗಳ ಕೊರತೆ ಇದೆ. ಶುದ್ಧ ಕುಡಿಯುವ ನೀರಿನ ಘಟಕವಿದ್ದರೂ ಬಳಕೆಗೆ ಬಾರದಂತಾಗಿದೆ. ಕೂಡಲೇ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಗೌರವಾಧ್ಯಕ್ಷೆ ಪುಟ್ಟಮ್ಮ, ತಾಲೂಕು ಅಧ್ಯಕ್ಷ ಸೈಯದ್ ಅನ್ಸರ್, ರೇಖಾ ಭಾಸ್ಕರ್, ಸವಿತಾ, ಸುಜಾತಾ, ರಾಜಪ್ಪ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net