ಪಟ್ಟಣದಿಂದ 5 ಕಿ.ಮೀ. ಅಂತರ ಹೊಂದಿರುವ ಈ ಮಾರ್ಗವು ರಾಮಾಪುರ, ನಾಲ್‌ರೋಡ್ ಮೂಲಕ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಅಂತಾರಾಜ್ಯ ಹೆದ್ದಾರಿಯಾಗಿದೆ. ಜತೆಗೆ ಈ ಭಾಗದ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದ್ದು, ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ರಸ್ತೆ ಡಾಂಬರ್ ಕಂಡು ದಶಕಗಳೇ ಆಗಿದೆ. 2 ವರ್ಷದಿಂದ ಈ ಮಾರ್ಗದ ಬಹುತೇಕ ಕಡೆ ಗುಂಡಿ ಬಿದ್ದಿದ್ದವು. ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದರು. ಬೈಕ್ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದರು. ರಸ್ತೆ ಅಭಿವೃದ್ಧಿಪಡಿಸುವಂತೆ ಸಾರ್ವಜನಿಕರಿಂದ ಒತ್ತಾಯ ಕೇಳಿ ಬಂದಿತ್ತು.