ಚರಂಡಿಯಲ್ಲಿಮ ಹೂಳು ತೆಗೆಸಲು ಆಗ್ರಹ

ಪೊನ್ನಾಚಿ ಗ್ರಾಪಂ ವ್ಯಾಪ್ತಿಯ ಮೇಗಲೂರು ಗ್ರಾಮದ ಚರಂಡಿಯಲ್ಲಿ ಹೂಳು ತುಂಬಿರುವುದು.
ಪೊನ್ನಾಚಿ ಗ್ರಾಪಂ ವ್ಯಾಪ್ತಿಯ ಮೇಗಲೂರು ಗ್ರಾಮದ ಚರಂಡಿಯಲ್ಲಿ ಹೂಳು ತುಂಬಿರುವುದು.
Published on
ಹನೂರು: ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗಲೂರು ಗ್ರಾಮದ ಚರಂಡಿಯಲ್ಲಿ ತುಂಬಿರುವ ಹೂಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕಳೆದ ಒಂದು ವರ್ಷದಿಂದ ಚರಂಡಿ ಹೂಳನ್ನು ತೆರವುಗೊಳಿಸಿಲ್ಲ. ಇದರಿಂದ ಚರಂಡಿಯಲ್ಲಿ ತ್ಯಾಜ್ಯ ಸಂಗ್ರಹವಾಗಿದ್ದು, ದುರ್ವಾಸನೆ ಬೀರುವುದರ ಜತೆಗೆ ಸೊಳ್ಳೆಗಳ ಆವಾಸ ಸ್ಥಾನವಾಗಿ ಮಾರ್ಪಟ್ಟಿದೆ. ಈ ಬಗ್ಗೆ ಗ್ರಾಪಂ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಕ್ರಮವಾಗಿಲ್ಲ. ಇದರಿಂದ ರೋಗದ ಭೀತಿ ಹೆಚ್ಚಿದೆ. ಆದ್ದರಿಂದ ಇನ್ನಾದರೂ ಚರಂಡಿಯಲ್ಲಿ ಹೂಳನ್ನು ತೆಗೆದು ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕನ್ನಡಿಗರ ವಿಜಯಸೇನೆ ವತಿಯಿಂದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ಪೊನ್ನಾಚಿ ರಾಜು ಎಚ್ಚರಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net