ಜಿಲ್ಲಾಡಳಿತ ಭವನಕ್ಕೆ ಉಪಮುಖ್ಯಮಂತ್ರಿ ಭೇಟಿ

ಉಪಮುಖ್ಯಂಮತ್ರಿಗಳು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಉಪಮುಖ್ಯಂಮತ್ರಿಗಳು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಡಾ. ಬಿ.ಆರ್. ಅಂಬೇಡ್ಕರ್, ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ
  • ಡಿಸಿಎಂ ಡಾ.ಜಿ.ಪರಮೇಶ್ವರ್ ಭಾಗಿ
ಚಾಮರಾಜನಗರ: ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಇಂದು ಜಿಲ್ಲಾಡಳಿತ ಭವನಕ್ಕೆ ಆಗಮಿಸಿ ಗೌರವ ವಂದನೆ ಸ್ವೀಕರಿಸಿದರು.
ಇದೇ ವೇಳೆ ಉಪಮುಖ್ಯಂಮತ್ರಿಗಳು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದರು. ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್, ದರ್ಶನ್ ಧ್ರುವನಾರಾಯಣ್, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು ಈ ಸಂದರ್ಭದಲ್ಲಿ ಇದ್ದರು.
ನಂತರ ಉಪಮುಖ್ಯಮಂತ್ರಿಗಳು ಬರ ಪೀಡಿತ ಸ್ಥಳಗಳ ಮುಂದುವರಿದ ಪರಿಶೀಲನೆ ಕಾರ್ಯಕ್ಕೆ ತೆರಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net