ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಧ್ರುವನಾರಾಯಣ ಅವರ ಮೂರನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಧ್ರುವನಾರಾಯಣ ಶಾಸಕ, ಸಂಸದರಾಗಿ ಅನೇಕ ಜನಪರ ಕೆಲಸ ಮಾಡಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ನಂತರ ರಾಜ್ಯದ ವಿವಿಧ ಮೂಲೆಗಳಲ್ಲಿ ಸಂಚರಿಸುವ ಮೂಲಕ ಕೊಡಗು, ಮಂಗಳೂರು, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣರಾಗಿದ್ದರು. ಇಂತಹ ಅಪರೂಪದ ರಾಜಕಾರಣಿ ಇತರರಿಗೂ ಮಾದರಿಯಾಗಲಿ ಎಂದರು.