ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಇನ್ನಿತರೆ ಇಲಾಖೆಗಳ ವಿದ್ಯಾರ್ಥಿಗಳಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ ಎಂದು ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಅಸಮಾಧಾನ ವ್ಯಕ್ತಪಡಿಸಿದರು. ಹಾಸ್ಟೆಲ್‌ಗಳಲ್ಲಿ ಸಿಬ್ಬಂದಿಗಳು ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸುವುದಿಲ್ಲ, ಶುದ್ಧ ಕುಡಿಯುವ ನೀರು, ಶೌಚಾಲಯ, ಗ್ರಂಥಾಲಯ ಸೌಲಭ್ಯಗಳು ಇಲ್ಲದೇ ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ್ಯಾಡ್, ಸಮವಸ, ಆಟದ ಪರಿಕರಗಳನ್ನು ನೀಡಿಲ್ಲ, ಆರೋಗ್ಯ ತಪಾಸಣೆ ಮಾಡಿಸಿಲ್ಲ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕಂಪ್ಯೂಟರ್‌ಗಳು ಇಲ್ಲ, ಕಾಲಕಾಲಕ್ಕೆ ಪಾಲಕರ ಸಭೆಯನ್ನು ಕರೆದಿಲ್ಲ ಎಂದು ಬೇಸರ ಹೊರಹಾಕಿದರು. ಹಾಸ್ಟೆಲ್‌ಗಳಿಗೆ ಆಹಾರ ಪೂರೈಕೆ ಮಾಡುವವರು ಸಮರ್ಪಕವಾಗಿ ಪೂರೈಸುತ್ತಿಲ್ಲ, ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದು ಸೂಚನೆ ನೀಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಈ ವೇಳೆ ತರಾಟೆಗೆ ತೆಗೆದುಕೊಂಡರು.