ಮಾಚಿದೇವ ಜಯಂತಿಗೆ ಅನುದಾನ ನೀಡದಕ್ಕೆ ಅಸಮಾಧಾನ

ಕೊಳ್ಳೇಗಾಲ ಪಟ್ಟಣದ ತಾಲೂಕು ಕಚೇರಿಯಲ್ಲಿ ಬುಧವಾರ ಶ್ರೀ ಮಡಿವಾಳ ಮಾಚಿದೇವ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು.
ಕೊಳ್ಳೇಗಾಲ ಪಟ್ಟಣದ ತಾಲೂಕು ಕಚೇರಿಯಲ್ಲಿ ಬುಧವಾರ ಶ್ರೀ ಮಡಿವಾಳ ಮಾಚಿದೇವ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಮಡಿವಾಳರ ಸಂಘದ ಪದಾಧಿಕಾರಿಗಳಿಂದ ಮನವಿ ಸಲ್ಲಿಕೆ
ಕೊಳ್ಳೇಗಾಲ: ಪಟ್ಟಣದ ತಾಲೂಕು ಕಚೇರಿಯಲ್ಲಿ ಬುಧವಾರ ಶ್ರೀ ಮಡಿವಾಳ ಮಾಚಿದೇವ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು. ತಹಸೀಲ್ದಾರ್ ಕೊಠಡಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶ್ರೀ ಮಡಿವಾಳ ಮಾಚಿದೇವ ಭಾವಚಿತ್ರವನ್ನು ಇಟ್ಟು ಪೂಜೆ ಸಲ್ಲಿಸಿ, ಪುಷ್ಪ ನಮನ ಅರ್ಪಿಸುವ ಮೂಲಕ ಆಚರಿಸಲಾಯಿತು.
ತಹಸೀಲ್ದಾರ್ ಬಸವರಾಜು, ಗ್ರೇಡ್ 2 ತಹಸೀಲ್ದಾರ್ ಕುಮಾರ್, ಶಿರಸ್ತೇದಾರ ಕೃಪಕಾರ್, ಮಡಿವಾಳ ಸಮಾಜದ ಅಧ್ಯಕ್ಷ ಗೋವಿಂದಯ್ಯ, ಯಜಮಾನರಾದ ಮಾರಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಭುಸ್ವಾಮಿ, ಸಹ ಕಾರ್ಯದರ್ಶಿ ಆನಂದ ಹಾಗೂ ಕುಲಬಾಂಧವರು, ಮುಖಂಡರು, ತಹಸೀಲ್ದಾರ್ ಕಚೇರಿಯ ಸಿಬ್ಬಂದಿ ಇದ್ದರು.
ಸರ್ಕಾರದ ಧೋರಣೆ ಖಂಡಿಸಿ ಪತ್ರ;
ಶ್ರೀ ಮಡಿವಾಳ ಮಾಚಿದೇವ ಜಯಂತಿ ಆಚರಣೆ ವಿಚಾರದಲ್ಲಿ ಸರ್ಕಾರದ ಧೋರಣೆ ಖಂಡಿಸಿ ಕೊಳ್ಳೇಗಾಲ ಪಟ್ಟಣ ಮಡಿವಾಳರ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಬಸವರಾಜು ಅವರ ಮೂಲಕ ಸರ್ಕಾರಕ್ಕೆ ಪತ್ರ ನೀಡಿದರು. ಪತ್ರದಲ್ಲಿ ಇತ್ತೀಚೆಗೆ 4 ವರ್ಷದಿಂದ ಜಯಂತಿ ಆಚರಣೆಗೆ ಅನುದಾನವಿಲ್ಲ ಎನ್ನುತ್ತಿದ್ದಾರೆ. ಎಲ್ಲ ಮಹನೀಯರು, ಶರಣರ ಹಣ ಬಿಡುಗಡೆ ಮಾಡಿರುವ ಸರ್ಕಾರ ನಮ್ಮ ಕುಲದೈವ ಮಡಿವಾಳ ಮಾಚಿದೇವರ ಜಯಂತಿಗೆ ಅನುದಾನ ಕೊಟ್ಟಿಲ್ಲದಿರುವುದು ಅನ್ಯಾಯವಾಗಿದೆ. ಮುಂದಿನ ದಿನಗಳಲ್ಲಿ ನಮ್ಮ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯ ನಿಲ್ಲಿಸದಿದ್ದರೆ ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಜತೆಗೆ ಸರಳ ಜಯಂತಿ ಆಚರಣೆಯಲ್ಲಿ ಭಾಗವಹಿಸಿದರೂ ತಾಲೂಕು ಆಡಳಿತದ ಅತಿಥ್ಯವನ್ನು ಸ್ವೀಕರಿಸದೆ ಸಮಾಜದ ಮುಖಂಡರು ಹೊರ ನಡೆದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net