ವಿದ್ಯಾರ್ಥಿಗಳಿಗೆ ಸಮವಸ್ತ್ರ, ನೋಟ್‌ಬುಕ್ ವಿತರಣೆ

ಯಳಂದೂರು ಪಟ್ಟಣ ಸಿದ್ಧಾರ್ಥ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಸಂಸ್ಥೆಯ ನಿರ್ದೇಶಕ ಶಾಂತರಾಜು, ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಸಮವಸ್ತ್ರ ವಿತರಿಸಿದರು. ಶಾಲೆಯ ಮುಖ್ಯಶಿಕ್ಷಕ ಎ.ಶಿವಣ್ಣ, ಅಶ್ವಿನಿ ಇತರರು ಇದ್ದರು.
ಯಳಂದೂರು ಪಟ್ಟಣ ಸಿದ್ಧಾರ್ಥ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಸಂಸ್ಥೆಯ ನಿರ್ದೇಶಕ ಶಾಂತರಾಜು, ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಸಮವಸ್ತ್ರ ವಿತರಿಸಿದರು. ಶಾಲೆಯ ಮುಖ್ಯಶಿಕ್ಷಕ ಎ.ಶಿವಣ್ಣ, ಅಶ್ವಿನಿ ಇತರರು ಇದ್ದರು.
Published on

ಯಳಂದೂರು :

ಪಟ್ಟಣದ ಸಿದ್ಧಾರ್ಥ ವಿದ್ಯಾಸಂಸ್ಥೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರದಲ್ಲಿ ವಿದ್ಯಾಸಂಸ್ಥೆಯ ನಿರ್ದೇಶಕ ಶಾಂತರಾಜು ತಾಲೂಕಿನ ವಿವಿಧ ಶಾಲೆಯ ಒಟ್ಟು 160ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್, 8ನೇ ತರಗತಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಸೇರಿದಂತೆ ಕಲಿಕಾ ಸಾಮಗ್ರಿ ವಿತರಿಸಿದರು.

ಬಳಿಕ ಮಾತನಾಡಿ, ವಿದ್ಯಾರ್ಥಿಗಳು ಓದಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಉಚಿತ ಸಮವಸ್ತ್ರ, ನೋಟ್‌ಬುಕ್ ಸೇರಿದಂತೆ ಕಲಿಕಾ ಸಾಮಗ್ರಿ ನೀಡಲಾಗುತ್ತಿದೆೆ. ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉನ್ನತ ಹುದ್ದೆ ಅಲಂಕರಿಸಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಸಿದ್ಧಾರ್ಥ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ.ಬಸವರಾಜು, ದಾನಿಗಳಾದ ಅಶ್ವಿನಿ ಶಾಂತರಾಜು, ಶಾಲೆಯ ಮುಖ್ಯಶಿಕ್ಷಕ ಎ.ಶಿವಣ್ಣ, ಶಿಕ್ಷಕರಾದ ಮಂಜುನಾಥ್, ಟಿ.ಎಂ.ರಘು, ಮುರಳಿ, ಗೋಪಾಲಕೃಷ್ಣ, ಮಹೇಶ್, ನಾಗಮಣಿ, ಸೋಮಶೇಖರ್ ಸೇರಿದಂತೆ ಸಿಬ್ಬಂದಿ ಇದ್ದರು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net