ಸಕಾಲಕ್ಕೆ ಸಾರ್ವಜನಿಕರ ಕೆಲಸ ಮಾಡಿಕೊಡಿ

ಕೊಳ್ಳೇಗಾಲ ಪಟ್ಟಣದ ಎಸ್‌ವಿಕೆ ಪದವಿ ಪೂರ್ವ ಕಾಲೇಜಿಗೆ ಮೋನಾರೊತ್ ಭೇಟಿ ನೀಡಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪರೀಕ್ಷಾ ಪೂರ್ವ ತಯಾರಿ ಮಾಹಿತಿ ಪಡೆದರು.
ಕೊಳ್ಳೇಗಾಲ ಪಟ್ಟಣದ ಎಸ್‌ವಿಕೆ ಪದವಿ ಪೂರ್ವ ಕಾಲೇಜಿಗೆ ಮೋನಾರೊತ್ ಭೇಟಿ ನೀಡಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪರೀಕ್ಷಾ ಪೂರ್ವ ತಯಾರಿ ಮಾಹಿತಿ ಪಡೆದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಪಂ ಸಿಇಒ ಮೋನಾರೋತ್ ಸೂಚನೆ
  • ಕೊಳ್ಳೇಗಾಲ ಪಟ್ಟಣದ ಎಸ್‌ವಿಕೆ ಪದವಿ ಪೂರ್ವ ಕಾಲೇಜಿಗೆ ಮೋನಾರೊತ್ ಭೇಟಿ
ಕೊಳ್ಳೇಗಾಲ: ಸಾರ್ವಜನಿಕರ ಕೆಲಸಗಳನ್ನು ಸಕಾಲಕ್ಕೆ ಮಾಡಿಕೊಡಬೇಕೆಂದು ಅಧಿಕಾರಿಗಳು, ನೌಕರರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೋನಾರೊತ್ ಸೂಚನೆ ನೀಡಿದರು.
ಪಟ್ಟಣದ ತಾಲೂಕು ಪಂಚಾಯತಿ ಕಚೇರಿಯಲ್ಲಿರುವ ದಾಖಲೆ ಸಂಗ್ರಹ ಕೊಠಡಿ, ಪಂಚಾಯತ್ ರಾಜ್ ಕಚೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಚೇರಿಗಳಿಗೆ ಶುಕ್ರವಾರ ಭೇಟಿ ನೀಡಿ ಸಿಬ್ಬಂದಿ ಹಾಜರಾತಿ ಪರಿಶೀಲಿಸಿ ನಂತರ ಮಾತನಾಡಿದರು.
ಬಳಿಕ ಎಸ್‌ವಿಕೆ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ತೆರಳಿದರು. ಎಸ್ಸೆಸ್ಸೆಲ್ಸಿ, ಪಿಯುಸಿ ಮಕ್ಕಳನ್ನು ಭೇಟಿ ಮಾಡಿ ಪರೀಕ್ಷೆ ತಯಾರಿಯ ಬಗ್ಗೆ ಮಾಹಿತಿ ಪಡೆದರು. ಪರೀಕ್ಷೆ ಸಮಯ ಹತ್ತಿರದಲ್ಲಿದ್ದು ವಿದ್ಯಾರ್ಥಿಗಳು ಚೆನ್ನಾಗಿ ಓದಬೇಕು. ಪರೀಕ್ಷೆಯಲ್ಲಿ ಶಾಲಾ-ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ ನೀಡಬೇಕು. ಕಷ್ಟ ಕರವಾದ ವಿಷಯಗಳ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಸೂಚನೆ ನೀಡಿದರು. ನಂತರ, ಶಾಲೆಯ ಅಡುಗೆ ತಯಾರಿಕೆ ಕೊಠಡಿಯನ್ನು ಖುದ್ದು ಪರಿಶೀಲಿಸಿದ್ದರಲ್ಲದೆ ವಿದ್ಯಾರ್ಥಿಗಳಿಗೆ ನೀಡುವ ಮಧ್ಯಾಹ್ನದ ಬಿಸಿಊಟವನ್ನು ಸವಿದು ಗುಣಮಟ್ಟ ಖಾತ್ರಿಪಡಿಸಿಕೊಂಡರು. ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ನೈರ್ಮಲ್ಯ ಮತ್ತು ಆಹಾರದ ಶುಚಿತ್ವ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಗಡಿ, ಪಂಚಾಯತ್ ರಾಜ್ ಇಲಾಖೆಯ ಎಇಇ ಕುಮಾರ್, ಬಿಇಒ ಮಂಜುಳಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net