ಜೋರು ಮಳೆಗೆ ದೊಡ್ಡಾಣೆ ಕೆರೆ ಭರ್ತಿ

ದೊಡ್ಡಾಣೆ ಗ್ರಾಮದಲ್ಲಿ ಸುರಿದ ಜೋರು ಮಳೆಗೆ ಕೆರೆ ಭರ್ತಿಯಾಗಿ ಕೋಡಿ ಬಿದ್ದಿರುವುದು.
ದೊಡ್ಡಾಣೆ ಗ್ರಾಮದಲ್ಲಿ ಸುರಿದ ಜೋರು ಮಳೆಗೆ ಕೆರೆ ಭರ್ತಿಯಾಗಿ ಕೋಡಿ ಬಿದ್ದಿರುವುದು.
Published on
ಹನೂರು: ಶ್ರೀಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ದೊಡ್ಡಾಣೆ ಗ್ರಾಮದಲ್ಲಿ ಸೋಮವಾರ ಸುರಿದ ಜೋರು ಮಳೆಗೆ ಗ್ರಾಮದ ಕೆರೆಯು ಭರ್ತಿಯಾಗಿ ಕೋಡಿ ಬಿದ್ದು ನೀರು ಹರಿಯಿತು.
ಮಳೆಯ ಕೊರತೆಯಿಂದಾಗಿ ದೊಡ್ಡಾಣೆ ಗ್ರಾಮದಲ್ಲಿ ಅಂತರ್ಜಲ ಮಟ್ಟ ಕುಸಿತದಿಂದ, ಕುಡಿಯುವ ನೀರಿನ ಸಮಸ್ಯೆಯಾಗಿತ್ತು. ಸುಮಾರು 2 ಗಂಟೆಗಳ ಕಾಲ ಸುರಿದ ಜೋರು ಮಳೆಗೆ ಕೆರೆಯು ಭರ್ತಿಯಾಗಿ ಕೋಡಿ ಬಿದ್ದು ಹಳ್ಳಕೊಳ್ಳದ ಮೂಲಕ ನೀರು ಹರಿಯಿತು. ಈ ಮಳೆಯಿಂದಾಗಿ ಅಂತರ್ಜಲ ಮಟ್ಟ ಸುಧಾರಣೆಗೊಂಡಿದ್ದು, ಜನ, ಜಾನುವಾರುಗಳ ಕುಡಿಯುವ ನೀರಿಗೆ ಅನುಕೂಲವಾಗಿದೆ. ಕೆರೆ ಕೋಡಿ ಬಿದ್ದು ನೀರು ಹರಿಯುತ್ತಿರುವ ದೃಶ್ಯವನ್ನು ಗ್ರಾಮಸ್ಥರು ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net