ಸಮಯ ವ್ಯರ್ಥ ಮಾಡದೆ ಓದಿನ ಕಡೆ ಗಮನ ಹರಿಸಿ

ರಾಮಾಪುರ ಜೆಎಸ್‌ಎಸ್ ಸಭಾ ಭವನದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಭರವಸೆಯ ಬೆಳಕು ಕಾರ್ಯಕ್ರಮವನ್ನು ಶಾಸಕ ಎಂ.ಆರ್ ಮಂಜುನಾಥ್ ಉದ್ಘಾಟಿಸಿದರು. ಮಹೇಶ್, ವೆಂಕಟೇಶ್, ಅಶೋಕ್, ಚಂದ್ರಶೇಖರ್ ಇತರರು ಇದ್ದರು.
ರಾಮಾಪುರ ಜೆಎಸ್‌ಎಸ್ ಸಭಾ ಭವನದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಭರವಸೆಯ ಬೆಳಕು ಕಾರ್ಯಕ್ರಮವನ್ನು ಶಾಸಕ ಎಂ.ಆರ್ ಮಂಜುನಾಥ್ ಉದ್ಘಾಟಿಸಿದರು. ಮಹೇಶ್, ವೆಂಕಟೇಶ್, ಅಶೋಕ್, ಚಂದ್ರಶೇಖರ್ ಇತರರು ಇದ್ದರು.
Published on

ವಿದ್ಯಾರ್ಥಿಗಳಿಗೆ ಶಾಸಕ ಎಂ.ಆರ್.ಮಂಜುನಾಥ್ ಸಲಹೆ

ಹನೂರು: ಸಮಯವನ್ನು ವ್ಯರ್ಥ ಮಾಡದೇ ಪ್ರತಿಯೊಬ್ಬರೂ ಓದಿನ ಕಡೆ ಹೆಚ್ಚಿನ ಒತ್ತನ್ನು ನೀಡುವುದರ ಮೂಲಕ ಎಸ್ಸೆಸ್ಸೆಲ್ಸಿಯಲ್ಲಿ ಎಲ್ಲರೂ ಪಾಸಾಗಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.
ಶೈಕ್ಷಣಿಕ ವಲಯದ ರಾಮಾಪುರ ಜೆಎಸ್‌ಎಸ್ ಸಭಾ ಭವನದಲ್ಲಿ ಶನಿವಾರ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಭರವಸೆಯ ಬೆಳಕು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಪ್ರಮುಖ ಘಟ್ಟ. ಭವಿಷ್ಯವನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ನಿಟ್ಟಿನಲ್ಲಿ ಪಾಲಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಉತ್ತಮ ಫಲಿತಾಂಶವನ್ನು ಪಡೆಯುವ ದಿಸೆಯಲ್ಲಿ ಶಿಕ್ಷಕರು ಶ್ರಮಿಸುತ್ತಿದ್ದಾರೆ. ಹಾಗಾಗಿ ಪ್ರತಿಯೊಬ್ಬರೂ ಈ ಬಗ್ಗೆ ಮನದಟ್ಟು ಮಾಡಿಕೊಂಡು ನಿರ್ದಿಷ್ಟ ಗುರಿಯನ್ನು ಹೊಂದುವುದರ ಜತೆಗೆ ಓದಿಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಎಸ್ಸೆಸ್ಸೆಲ್ಸಿಯಲ್ಲಿ ಪ್ರತಿಯೊಬ್ಬರೂ ಪಾಸಾಗಬೇಕು. ಈ ಮೂಲಕ ಪಾಲಕರು, ಶಿಕ್ಷಕರು ಹಾಗೂ ವಲಯಕ್ಕೆ ಕೀರ್ತಿ ತರಬೇಕು. ಈ ಬಗ್ಗೆ ನಿರೀಕ್ಷೆ ಇಟ್ಟುಕೊಂಡಿದ್ದೇವೆ. ಈ ನಿರೀಕ್ಷೆಯನ್ನು ಈಡೇರಿಸಬೇಕು ಎಂದು ತಿಳಿಸಿದರು.
ನಾನೂ ಲಾಸ್ಟ್ ಬೆಂಚ್ ಸ್ಟೂಡೆಂಟ್: ವಿದ್ಯಾರ್ಥಿ ಜೀವನದಲ್ಲಿ ನಾನೂ ಸಹ ಲಾಸ್ಟ್ ಬೆಂಚ್ ಸ್ಟೂಡೆಂಟ್ ಆಗಿದ್ದೆ. ಆದರೆ ನಿರ್ದಿಷ್ಟ ಗುರಿಯನ್ನು ಸಾಧಿಸಬೇಕು ಎಂದು ಛಲ ಹೊಂದಿದ್ದೆ. ಇದೀಗ ಶಾಸಕನಾಗಿದ್ದೇನೆ. ಜನರ ವಿಶ್ವಾಸದಿಂದ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಅವರ ಋಣವನ್ನು ತೀರಿಸುವ ಕೆಲಸ ಮಾಡುತ್ತಿದ್ದೇನೆ. ಎಲ್ಲರೂ ಪಾಸಾಗುವುದರ ಮೂಲಕ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶವನ್ನು ತಂದು ಕೊಡುವ ಕೆಲಸವೂ ಒಂದು. ಇದು ನಿಮ್ಮ ಕೈಯಲ್ಲಿದೆ. ಆದ್ದರಿಂದ ಪ್ರತಿಯೊಬ್ಬರೂ ನಿರ್ದಿಷ್ಟ ಗುರಿಯನ್ನು ಹೊಂದಿ ಸಾಧಿಸುವುದರತ್ತ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.
ಬಳಿಕ ಕಳೆದ ಸಾಲಿನಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮವು ಹನೂರಿನ ಶ್ರೀ ವಿವೇಕಾನಂದ ಶಾಲೆಯಲ್ಲೂ ನಡೆಯಿತು. ಬಿಇಒ ಮಹೇಶ್, ಬಿಆರ್‌ಸಿ ವೆಂಕಟೇಶ್, ಶಿಕ್ಷಣ ಸಂಯೋಜಕರಾದ ಅಶೋಕ್, ರವೀಂದ್ರ, ಚಿನ್ನಪ್ಪಯ್ಯ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್, ದೈಹಿ ಶಿಕ್ಷಣ ಪರಿವೀಕ್ಷಕ ಕೆಂಪರಾಜು, ಸಂಪನ್ಮೂಲ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net