ಮನೆ ಬಾಗಿಲಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ

ಯಳಂದೂರು ತಾಲೂಕಿನ ಗೋಪಾಲಸ್ವಾಮಿ ಗ್ಯಾಸ್ ಏಜೆನ್ಸಿಯವರು ಶುಕ್ರವಾರ ವಾಹನದ ಮೂಲಕ ಗ್ರಾಮೀಣ ಭಾಗದ ಗ್ರಾಹಕರಿಗೆ ಸಿಲಿಂಡರ್ ಪೂರೈಕೆ ಮಾಡಿರುವುದು
ಯಳಂದೂರು ತಾಲೂಕಿನ ಗೋಪಾಲಸ್ವಾಮಿ ಗ್ಯಾಸ್ ಏಜೆನ್ಸಿಯವರು ಶುಕ್ರವಾರ ವಾಹನದ ಮೂಲಕ ಗ್ರಾಮೀಣ ಭಾಗದ ಗ್ರಾಹಕರಿಗೆ ಸಿಲಿಂಡರ್ ಪೂರೈಕೆ ಮಾಡಿರುವುದು
Published on

ಪ್ರಮುಖ ಮುಖ್ಯಾಂಶಗಳು

  • ವಿಜಯವಾಣಿ ವರದಿ ಪರಿಣಾಮ
ಯಳಂದೂರು: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಗ್ಯಾಸ್ ಸಿಲಿಂಡರ್ ಬುಕ್ ಮಾಡಿ ಹಲವು ದಿನ ಕಳೆದರೂ ಪೂರೈಸುತ್ತಿರಲಿಲ್ಲ. ಆದರೆ, ಶುಕ್ರವಾರದಿಂದ ಬುಕ್ ಮಾಡಿದ ಗ್ರಾಹಕರ ಮನೆ ಬಾಗಿಲಿಗೆ ಗ್ಯಾಸ್ ಸಿಲಿಂಡರ್ ಪೂರೈಸಲಾಗುತ್ತಿದೆ.
ಕೃಷ್ಣಪುರ ಗ್ರಾಮದ ಬಳಿಯ ಏಜೆನ್ಸಿಯ ಗೋದಾಮಿನ ಬಳಿ ಸಾವಿರಾರು ಜನರು ತಮ್ಮ ಕೆಲಸ ಕಾರ್ಯವೆಲ್ಲ ಬಿಟ್ಟು ಗ್ಯಾಸ್ ಸಿಲಿಂಡರ್‌ಗಾಗಿ ಸಾಲುಗಟ್ಟಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಗ್ರಾಹಕರ ಸಮಸ್ಯೆ ಬಗ್ಗೆ ಮಾ.27ರಂದು ವಿಜಯವಾಣಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಾಗಿ ಪರದಾಟ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿತ್ತು.
ಈ ಬೆನ್ನಲ್ಲೇ ಆಹಾರ ನಾಗರಿಕರ ಸರಬರಾಜು ಇಲಾಖೆಯ ಅಧಿಕಾರಿಗಳು ಯಳಂದೂರು ಗೋಪಾಲಸ್ವಾಮಿ ಗ್ಯಾಸ್ ಏಜೆನ್ಸಿಸ್ ಅವರಿಗೆ ದೂರವಾಣಿ ಕರೆ ಮೂಲಕ ಗ್ರಾಮೀಣ ಭಾಗದ ಗ್ರಾಹಕರ ಮನೆ ಬಾಗಿಲಿಗೆ ಸಿಲಿಂಡರ್ ಪೂರೈಕೆ ಮಾಡುವಂತೆ ಸೂಚಿಸಿದರು. ಈ ಹಿನ್ನೆಲೆಯಲ್ಲಿ ಬುಕ್ ಮಾಡಿದ ಸಾರ್ವಜನಿಕರ ಮನೆ ಬಾಗಿಲಿಗೆ ಗ್ಯಾಸ್ ಸಿಲಿಂಡರ್ ಅನ್ನು ಪೂರೈಸಲಾಗುತ್ತಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net