ಲಾರಿ ಪಲ್ಟಿಯಾಗಿ ಚಾಲಕ ಸಾವು

ಧನುಷ್
ಧನುಷ್
Published on
ಹನೂರು: ತಾಲೂಕಿನ ರಾಮಾಪುರ ಸಮೀಪದ ನಾಲ್‌ರೋಡ್ ಬಳಿ ಶುಕ್ರವಾರ ರಾತ್ರಿ ನಿಯಂತ್ರಣ ತಪ್ಪಿದ ಪರಿಣಾಮ ಲಾರಿಯೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟಿದ್ದಾರೆ.
ರಾಮಾಪುರ ಗ್ರಾಮದ ಧನುಷ್ (28) ಮೃತ ಚಾಲಕ. ಇವರು ಕೊಳ್ಳೇಗಾಲದಿಂದ ಲಾರಿಯಲ್ಲಿ ಸಕ್ಕರೆ ಮೂಟೆಗಳನ್ನು ತುಂಬಿಕೊಂಡು ತಮಿಳುನಾಡಿನ ತಂಜಾವೂರಿನ ಬಿಸ್ಕೆಟ್ ಕಂಪನಿಯೊಂದಕ್ಕೆ ಕೊಂಡೊಯ್ಯುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಪರಿಣಾಮ ಲಾರಿ ಪಲ್ಟಿ ಹೊಡೆದಿದ್ದು, ಚಾಲಕ ಲಾರಿ ಕೆಳಗೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಹನೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದರು. ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ವಾರಸುದಾರರಿಗೆ ನೀಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net