ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಯಳಂದೂರು ತಾಲೂಕಿನಲ್ಲಿ 1, ಹನೂರು ತಾಲೂಕಿನಲ್ಲಿ 35 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಈ ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್ ಮತ್ತು ಟ್ಯಾಂಕರ್, ತೆರದ ಬಾವಿ, ಕೈಪಂಪ್‌ಗಳ ಮೂಲಕ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇವುಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ.