ದ್ವಿತೀಯ ಪಿಯುಸಿ ಪರೀಕ್ಷೆಯ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಪಟ್ಟಣದ ಸರ್ಕಾರಿ ಎಸ್.ವಿ.ಕೆ ಬಾಲಕಿಯರ ಪದವಿಪೂರ್ವ ಕಾಲೇಜು ವಿದ್ಯಾ ರ್ಥಿಗಳಿಗಳನ್ನು ಶಿಕ್ಷಣ ಇಲಾಖೆ ಹಾಗು ಕಾಲೇಜಿನ ವತಿಯಿಂದ ಸನ್ಮಾನಿಸಿ ಗೌರವಿ ಸಲಾಯಿತು. ಎಂ.ಮಂಜುಳಾ, ಗುರುಶಾಂತಪ್ಪ ಬೆಳ್ಳುಂಗಡಿ, ಮಂಗಳ ಮೂರ್ತಿ ಇತರರು ಇದ್ದರು.
ಕೊಳ್ಳೇಗಾಲ: ಮಕ್ಕಳ ಭವಿಷ್ಯಕ್ಕೆ ಶಿಕ್ಷಣ ಬಹಳ ಮುಖ್ಯ. ಪಾಲಕರು ಮಕ್ಕಳ ಓದಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮಂಜುಳಾ ಹೇಳಿದರು.
ಪಟ್ಟಣದ ಸರ್ಕಾರಿ ಎಸ್.ವಿ.ಕೆ. ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ 2025-26ನೇ ಸಾಲಿನ ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾ ರ್ಥಿಗಳಿಗೆ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರಿ ಎಸ್.ವಿ.ಕೆ. ಕಾಲೇಜಿನ ವಿದ್ಯಾರ್ಥಿನಿ ಚೈತ್ರಾ ಕಲಾ ವಿಭಾಗದಲ್ಲಿ ಜಿಲ್ಲೆಗೆ ಟಾಪರ್ ಆಗಿ ಹೊಮ್ಮಿರುವುದು ಸಂತೋಷದ ವಿಚಾರವಾಗಿದೆ. ಹಾಗೆಯೇ, ಯಮುನಾ, ರಮ್ಯಾ ಇತರೆ ವಿದ್ಯಾ ರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ ಎಂದರು.
ಪರಿಶ್ರಮ, ನಿಯಮಿತ ಅಧ್ಯಯನ ಮತ್ತು ಶಿಕ್ಷಕರ ಸಮರ್ಪಿತ ಮಾರ್ಗದರ್ಶನವೇ ಈ ಮಹತ್ವದ ಸಾಧನೆಗೆ ಕಾರಣವಾಗಿದೆ .ಇಂತಹ ಸಾಧನೆಗಳು ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು ಎಂದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವ ಹಣಾಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಸವಾಲುಗಳನ್ನು ಮೀರಿ ಸಾಧನೆ ಮಾಡುತ್ತಿರುವುದು ಸಂತಸದ ಸಂಗತಿ. ಓದಿನಲ್ಲಿ ಅವರು ತೋರಿದ ನಿಷ್ಠೆ ಮತ್ತು ಶ್ರಮವು ಇತರರಿಗೆ ಮಾದರಿ ಯಾಗಿದೆ ಎಂದು ಶ್ಲಾಘಿಸಿದರು.
ಈ ವೇಳೆ ವಿಜ್ಞಾನ, ವಾಣಿಜ್ಯ, ಹಾಗೂ ಕಲಾ ವಿಭಾಗದಲ್ಲಿ ಹೆಚ್ಚು ಅಂಕ ಪಡೆದ 43 ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ನಗರಸಭೆ ಪೌರಾಯುಕ್ತೆ ರುದ್ರಮ್ಮ ಶರಣಯ್ಯ, ಉಪ ಖಜಾನಾಧಿಕಾರಿ ನಾಗರತ್ನ, ಕಾಲೇಜಿನ ಪ್ರಾಂಶುಪಾಲೆ ಡಾ.ಮಂಗಳಾಮೂರ್ತಿ, ಎಸ್.ವಿ.ಕೆ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಜೆ.ಹರ್ಷ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೋಸೆಫ್ ಅಲೆಕ್ಸಾಂಡರ್, ಕಾರ್ಯದರ್ಶಿ ಚಿಕ್ಕರಾಜು ಹಾಗೂ ವಿದ್ಯಾರ್ಥಿಗಳು ಇದ್ದರು.