ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಗೆ ಆಯ್ಕೆ

ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದ ಎನ್.ರಾಜೇಂದ್ರ ಅವರಿಗೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ನೇಮಕಾತಿ ಆದೇಶ ಪತ್ರವನ್ನು ಡಾ.ಎಸ್.ನಾರಾಯಣ್ ಹಾಗೂ ಶಾಸಕ ಎ.ಆರ್.ಕೃಷ್ಣಮೂರ್ತಿ ವಿತರಿಸಿದರು.
ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದ ಎನ್.ರಾಜೇಂದ್ರ ಅವರಿಗೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ನೇಮಕಾತಿ ಆದೇಶ ಪತ್ರವನ್ನು ಡಾ.ಎಸ್.ನಾರಾಯಣ್ ಹಾಗೂ ಶಾಸಕ ಎ.ಆರ್.ಕೃಷ್ಣಮೂರ್ತಿ ವಿತರಿಸಿದರು.
Published on
ಯಳಂದೂರು: ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ಕೆಸ್ತೂರು ಎನ್.ರಾಜೇಂದ್ರ ಆಯ್ಕೆಯಾಗಿದ್ದಾರೆ.
ಈ ಸಂಬಂಧ ಚಾಮರಾಜನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಪಕ್ಷದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕ ಡಾ.ಎಸ್.ನಾರಾಯಣ್ ಪ್ರಮಾಣ ಪತ್ರ ವಿತರಿಸಿದರು.
ಎನ್. ರಾಜೇಂದ್ರ ಮಾತನಾಡಿ, ನಾನು ಹಲವು ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ನನ್ನ ಸೇವೆಯನ್ನು ಪರಿಗಣಿಸಿ ನನಗೆ ಪಕ್ಷ ಹೊಸ ಜವಾಬ್ದಾರಿಯನ್ನು ನೀಡಿದೆ. ನಾನು ಈ ಸ್ಥಾನಕ್ಕೆ ನ್ಯಾಯವನ್ನು ಒದಗಿಸಿ ಪ್ರಾಮಾಣಿಕವಾಗಿ ಕರ್ತವ್ಯವನ್ನು ನಿರ್ವಹಿಸುತ್ತೇನೆ ಎಂದರು.
ಶಾಸಕ ಎ.ಆರ್. ಕೃಷ್ಣಮೂರ್ತಿ, ಪಕ್ಷದ ಜಿಲ್ಲಾಧ್ಯಕ್ಷ ಮರಿಸ್ವಾಮಿ ಮುಖಂಡರಾದ ಕೆಸ್ತೂರು ಗುರು, ಗುರುಲಿಂಗಯ್ಯ, ರವಿಕುಮಾರ್ ಸೇರಿದಂತೆ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net