ಮಹಿಳೆಯರು ಮಾತನಾಡಿ, ವಾರ್ಡ್‌ನಲ್ಲಿ ವಿವಿಧ ಸಮುದಾಯ ಒಳಗೊಂಡಂತೆ ಸುಮಾರು 850ಕ್ಕೂ ಹೆಚ್ಚು ಕುಟುಂಬಗಳಿವೆ. ಕಳೆದ ಒಂದು ತಿಂಗಳಿನಿಂದಲೂ ಕುಡಿಯುವ ನೀರಿನ ಸಮಸ್ಯೆ ಇದ್ದು, ಇದೀಗ ತೀವ್ರವಾಗಿದೆ. ಇದರಿಂದ ನೀರಿಗಾಗಿ ಕೂಲಿ ಕೆಲಸವನ್ನು ಬಿಟ್ಟು ಬಿಂದಿಗೆಯನ್ನಿಡಿದು ಅಲೆಯುವಂತಾಗಿದೆ. ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಪಂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಯಾವುದೇ ಕ್ರಮವಾಗಿಲ್ಲ. ಇದರಿಂದ ವಾರ್ಡ್‌ನಲ್ಲಿ ಕುಡಿಯುವ ನೀರಿನದ್ದೇ ಒಂದು ದೊಡ್ಡ ಸಮಸ್ಯೆಯಾಗಿದ್ದು, ನಿತ್ಯ ತೊಂದರೆ ಅನುಭವಿಸುತ್ತಿದ್ದೇವೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಕ್ರಮವಹಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲವಾದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.