ಎಸ್‌ಐಆರ್ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಿ

ಗುಂಡ್ಲುಪೇಟೆ ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಬೇಗೂರು ಹಾಗೂ ಗುಂಡ್ಲುಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಸಭೆಯನ್ನು ಎಸ್. ನಾರಾಯಣ್ ಉದ್ಘಾಟಿಸಿದರು. ಗಣೇಶ್ ಪ್ರಸಾದ್, ಮುನಿರಾಜು, ನಂಜಪ್ಪ, ರಾಜಶೇಖರ್ ಇದ್ದರು.
ಗುಂಡ್ಲುಪೇಟೆ ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಬೇಗೂರು ಹಾಗೂ ಗುಂಡ್ಲುಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಸಭೆಯನ್ನು ಎಸ್. ನಾರಾಯಣ್ ಉದ್ಘಾಟಿಸಿದರು. ಗಣೇಶ್ ಪ್ರಸಾದ್, ಮುನಿರಾಜು, ನಂಜಪ್ಪ, ರಾಜಶೇಖರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕಾಂಗ್ರೆಸ್ ಕಾರ್ಯಕರ್ತರಿಗೆ ಮುಖಂಡ ಎಸ್. ನಾರಾಯಣ್ ಸೂಚನೆ
ಗುಂಡ್ಲುಪೇಟೆ: ಮತದಾರರ ಹಕ್ಕು ರಕ್ಷಿಸುವುದು ಪಕ್ಷದ ಪ್ರಮುಖ ಉದ್ದೇಶವಾಗಿದೆ. ಕಾರ್ಯಕರ್ತರು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಚಲನಚಿತ್ರ ನಿರ್ಮಾಪಕ, ಕಾಂಗ್ರೆಸ್ ಮುಖಂಡ ಎಸ್.ನಾರಾಯಣ್ ಕರೆ ನೀಡಿದರು.
ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ಬೇಗೂರು ಹಾಗೂ ಗುಂಡ್ಲುಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ನಾನಾ ಕಾರಣಗಳನ್ನು ಮುಂದಿಟ್ಟುಕೊಂಡು ಮತದಾರರ ಪಟ್ಟಿಯಲ್ಲಿರುವ ಹೆಸರುಗಳನ್ನ ಅಳಿಸುವ ಪ್ರಯತ್ನ ನಡೆಯುತ್ತಿದೆ. ಇದರಿಂದ ಸಾಮಾನ್ಯ ಮತದಾರರ ಮತದಾನದ ಹಕ್ಕಿಗೆ ಧಕ್ಕೆಯಾಗುವ ಆತಂಕ ಎದುರಾಗಿದೆ. ಆದ್ದರಿಂದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬೂತ್ ಮಟ್ಟದ ಏಜೆಂಟ್‌ಗಳ ಜತೆಗೂಡಿ ಎಸ್‌ಐಆರ್ ಫಾರ್ಮ್‌ಗಳನ್ನು ಸರಿಯಾಗಿ ಭರ್ತಿ ಮಾಡುವ ಕಾರ್ಯಕ್ಕೆ ನೆರವಾಗಬೇಕು. ಮತದಾರರ ಹೆಸರು ಪಟ್ಟಿಯಲ್ಲಿ ಉಳಿಯಬೇಕಾದರೆ ಈ ಪ್ರಕ್ರಿಯೆಯಲ್ಲಿ ಜಾಗೃತಿ ಮತ್ತು ಜವಾಬ್ದಾರಿ ಅಗತ್ಯ ಎಂದು ಹೇಳಿದರು.
ಶಾಸಕ ಎಚ್.ಎಸ್. ಗಣೇಶ್ ಪ್ರಸಾದ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಕೆಲಸವನ್ನು ಪ್ರಚಾರ ಸಮಿತಿಯವರು ಮಾಡಬೇಕು, ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈಗಿನಿಂದಲೇ ಸಂಘಟಿತರಾಗಿ ಕಾರ್ಯನಿರ್ವಹಿಸಬೇಕಾಗಿದೆ ಹೇಳಿದರು.
ತಾಲೂಕಿನಲ್ಲಿ ಸಾಕಷ್ಟು ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ರಸ್ತೆ, ಸಮುದಾಯ ಭವನ, ದೇವಸ್ಥಾನಗಳ ಜೀರ್ಣೋದ್ಧಾರ ಸೇರಿದಂತೆ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಕಲ್ಲುಕಟ್ಟೆಗೆ ನೀರು ತುಂಬಿಸುವ ಯೋಜನೆಗೂ 475 ಕೋಟಿ ರೂ., ಅನುದಾನದಲ್ಲಿ ಕಾಮಗಾರಿ ಆರಂಭವಾಗಿದೆ. ಟಿಎಸ್‌ಪಿ ಅನುದಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ತಾಲೂಕಿನ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ವಿರೋಧ ಪಕ್ಷಗಳು ಜನರನ್ನು ದಾರಿತಪ್ಪಿಸಲು ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬುದು ಅಪಪ್ರಚಾರ ಮಾಡುತ್ತಿವೆ. ಆದರೆ ಇನ್ನೂ ಒಂದು ವಷರ್ ಒಂಬತ್ತು ತಿಂಗಳು ಅಧಿಕಾರಾವಧಿ ಉಳಿದಿದ್ದು, ಜನರಿಗೆ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ನೀಡುತ್ತೇವೆ ಎಂದು ಹೇಳಿದರು.
ಬೇಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ.ಮುನಿರಾಜು, ಗುಂಡ್ಲುಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಬಿ.ರಾಜಶೇಖರ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್. ನಂಜಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಎಸ್. ಮಹೇಶ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಧುಸೂದನ್, ಗ್ಯಾರೆಂಟಿ ಸಮಿತಿಯ ಅಧ್ಯಕ್ಷ ಎಚ್.ಜಿ.ಉಮಾಪತಿ, ಎಚ್.ಎನ್. ಬಸವರಾಜು, ಎಪಿಎಂಸಿ ಅಧ್ಯಕ್ಷ ಆರ್.ಎಸ್. ನಾಗರಾಜು, ಮಾಜಿ ಅಧ್ಯಕ್ಷ ಶಿವನಾಗಪ್ಪ, ಮಲೆಮಹದೇಶ್ವರಬೆಟ್ಟ ಧರ್ಮದರ್ಶಿ ಮಂಡಲಿಯ ಮಾಜಿ ಅಧ್ಯಕ್ಷ ಡಿ.ಎಸ್. ಸಿದ್ದಪ್ಪ, ಅಣ್ಣಯ್ಯಸ್ವಾಮಿ, ನಾಗರತ್ನಮ್ಮ, ಕುಮಾರ್, ಬಿ.ಜಿ. ಶಿವಕುಮಾರ್ ಸೇರಿದಂತೆ ಹಲವರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net