ಮಕ್ಕಳ ಶೈಕ್ಷಣಿಕ ಸೌಲಭ್ಯಕ್ಕಾಗಿ ಅರ್ಹರಿಗೆ ಜಾತಿ ಪ್ರಮಾಣಪತ್ರ ತಲುಪಿಸಿ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಕೊಠಡಿಯಲ್ಲಿಂದು ಜಾತಿ ಪ್ರಮಾಣಪತ್ರ ವಿತರಣೆ ಸಂಬಂಧ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ. ರಾಮಪ್ಪ ಅವರು ಜಿಲ್ಲಾಧಿಕಾರಿ ಶ್ರೀರೂಪ ಅವರೊಂದಿಗೆ ಚರ್ಚಿಸಿ ಸಮಾಲೋಚನೆ ನಡೆಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಕೊಠಡಿಯಲ್ಲಿಂದು ಜಾತಿ ಪ್ರಮಾಣಪತ್ರ ವಿತರಣೆ ಸಂಬಂಧ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ. ರಾಮಪ್ಪ ಅವರು ಜಿಲ್ಲಾಧಿಕಾರಿ ಶ್ರೀರೂಪ ಅವರೊಂದಿಗೆ ಚರ್ಚಿಸಿ ಸಮಾಲೋಚನೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ
  • ಡಿಸಿ ಶ್ರೀರೂಪಾ ಅವರೊಂದಿಗೆ ಸಭೆ
ಚಾಮರಾಜನಗರ: ಮಕ್ಕಳ ಶೈಕ್ಷಣಿಕ ಸೌಲಭ್ಯಕ್ಕೆ ಅನುಕೂಲವಾಗುವಂತೆ ಸ್ಥಳ ಮಹಜರು ಮಾಡಿ ಸತ್ಯಾಸತ್ಯತೆ ಪರಿಶೀಲಿಸಿ ಅರ್ಹರಿಗೆ ಜಾತಿ ಪ್ರಮಾಣಪತ್ರ ತಲುಪಿಸುವಂತೆ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ. ರಾಮಪ್ಪ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಕೊಠಡಿಯಲ್ಲಿಂದು ಜಾತಿ ಪ್ರಮಾಣಪತ್ರ ವಿತರಣೆ ಸಂಬಂಧ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ. ರಾಮಪ್ಪ ಅವರು ಜಿಲ್ಲಾಧಿಕಾರಿ ಶ್ರೀರೂಪ ಅವರೊಂದಿಗೆ ಚರ್ಚಿಸಿ ಸಮಾಲೋಚನೆ ನಡೆಸಿದರು.
ನಾಗೇಶ್ ಎಂಬುವವರು ಪರಿಶಿಷ್ಟ ಜಾತಿಯ ಭೋವಿ ಸಮುದಾಯದ ಒಡ್ಡರ ಜಾತಿಗೆ ಸೇರಿದ್ದು, ಇವರಿಗೆ ತೊಡಕಾಗಿರುವ ಜಾತಿ ಪ್ರಮಾಣ ಪತ್ರವನ್ನು ಸರಿಪಡಿಸಿಕೊಡುವಂತೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಅಧ್ಯಕ್ಷರು ಇವರ ಮನವಿಯಂತೆ ತಹಶೀಲ್ದಾರವರಿಗೆ ಸೂಚಿಸಿ ಜಾತಿ ಪ್ರಮಾಣ ಪತ್ರವನ್ನು ನೀಡಲು ತಿಳಿಸಿದರು.
ಇಡೀ ರಾಜ್ಯದಲ್ಲಿ ಪ್ರವಾಸ ಮಾಡಿದ್ದೇನೆ. ಈ ಸಮಸ್ಯೆ ಎಲ್ಲಿಯೂ ಕಂಡುಬಂದಿಲ್ಲ, ಕೊಳ್ಳೇಗಾಲ ತಾಲೂಕಿನ ಹೊಂಡರಬಾಳುವಿನಲ್ಲಿ 14 ಭೋವಿ ಸಮುದಾಯದ ಕುಟುಂಬಗಳು ವಾಸಿಸುತ್ತಿವೆ. ಅವರೆಲ್ಲರಿಗೂ ಕ್ರಮಬದ್ಧವಾಗಿ ಒಡ್ಡರು ಎಂಬುದಾಗಿ ನಮೂದಿಸಿ ಜಾತಿ ಪ್ರಮಾಣಪತ್ರ ನೀಡಲಾಗಿದೆ. ಇದರಂತೆ ಕಾನೂನು ಚೌಕಟ್ಟಿನಲ್ಲಿ ಮನವಿದಾರರಿಗು ಸೂಕ್ತ ಪ್ರಮಾಣ ಪತ್ರ ನೀಡಬೇಕು ಎಂದು ಅಧ್ಯಕ್ಷರು ಹೇಳಿದರು.
ಜಿಲ್ಲಾಧಿಕಾರಿ ಶ್ರೀರೂಪ ಅವರು ಮಾತನಾಡಿ ಸಾರ್ವಜನಿಕರಿಗೆ ಜಾತಿ ಪ್ರಮಾಣಪತ್ರಗಳನ್ನು ವಿತರಿಸುವ ಸಂದರ್ಭದಲ್ಲಿ ದಾಖಲೆಗಳನ್ನು ಗಂಭೀರವಾಗಿ ಪರಿಶೀಲಿಸಿ ಪ್ರಮಾಣಪತ್ರ ನೀಡಲಾಗುತ್ತದೆ. ನಾಗೇಶ್ ಅವರ ಮನವಿ ಹಾಗೂ ದೂರಿನ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿ ಸಮಸ್ಯೆ ಪರಿಹರಿಸಲು ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಡಿ.ಸಿ.ಆರ್.ಇ (ಡೈರೆಕ್ಟರೇಟ್ ಆಫ್ ಸಿವಿಲ್ ರೈಟ್ಸ್ ಏನ್ಫೋರ್ಸ್‍ಮೆಂಟ್) ವಿಭಾಗದ ಡಿವೈಎಸ್‍ಪಿ ವರದಿ ಆಧಾರದ ಮೇರೆಗೆ ಆದಷ್ಟು ಬೇಗನೆ ಸಮಸ್ಯೆ ಪರಿಹರಿಸಲಾಗುವುದು ಎಂದರು.
ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಡಿ.ಸಿ.ಆರ್.ಇ ವಿಭಾಗದ ಡಿವೈಎಸ್.ಪಿ ರಘು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಬಿ.ಎಸ್. ರಾಜು, ಮುಖಂಡರಾದ ಬಿ.ಕೆ. ರವಿಕುಮಾರ್, ಮಹಾದೇವ್, ಕೃಷ್ಣಮೂರ್ತಿ, ರವಿ, ನಾಗೇಶ್, ರಾಜೇಂದ್ರ, ಇತರರು ಇದೇ ಸಂದರ್ಭದಲ್ಲಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net