ವಿದ್ಯುತ್ ಪೂರೈಕೆ ಸಮರ್ಪಕ ನಿರ್ವಹಣೆಗೆ ನಿಗಾವಹಿಸಿ

ಕೊಳ್ಳೇಗಾಲ ಉಪ ವಿಭಾಗಕ್ಕೆ ಭೇಟಿ ನೀಡಿದ ಅವರು ಕೊಳ್ಳೇಗಾಲ, ಹನೂರು ಹಾಗೂ ಯಳಂದೂರು ತಾಲೂಕುಗಳು ಒಳಪಡುವ ಕೊಳ್ಳೇಗಾಲ ಉಪ ವಿಭಾಗದ ವಿದ್ಯುತ್ ಪೂರೈಕೆ ಪರಿಸ್ಥಿತಿ ಹಾಗೂ ನಿರ್ವಹಣೆ, ಐಪಿ ಫೀಡರ್‍ಗಳಿಗೆ ವಿದ್ಯುತ್ ಪೂರೈಕೆ ಮತ್ತು ಗೃಹಜ್ಯೋತಿ ಯೋಜನೆ ಫಲಾನುಭವಿಗಳ ಮಾಹಿತಿ ಸಂಗ್ರಹಣೆ ಕುರಿತ ಪ್ರಗತಿ ಪರಿಶೀಲನೆ ನಡೆಸಿ, ಮಾಹಿತಿಗಳನ್ನು ಪಡೆದರು.

Published on

ಪ್ರಮುಖ ಮುಖ್ಯಾಂಶಗಳು

  • ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಎಸ್. ಅರ್ಚನಾ ಸೂಚನೆ
  • ಕೊಳ್ಳೇಗಾಲ ಕಚೇರಿಯಲ್ಲಿ ಸಭೆ
ಚಾಮರಾಜನಗರ: ಗ್ರಾಹಕರಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಕಟ್ಟುನಿಟ್ಟಿನ ನಿಗಾವಹಿಸಿ, ಲಭ್ಯವಿರುವ ವಿದ್ಯುತ್ ಅನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಗ್ರಾಹಕರು ಹಾಗೂ ರೈತರಿಗೆ ಸಾಧ್ಯವಾದಷ್ಟು ಅಡಚಣೆ ರಹಿತ ವಿದ್ಯುತ್ ಪೂರೈಕೆ ಮಾಡುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕರಾದ ಎಂ.ಎಸ್. ಅರ್ಚನಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕೊಳ್ಳೇಗಾಲ ಉಪ ವಿಭಾಗಕ್ಕೆ ಭೇಟಿ ನೀಡಿದ ಅವರು ಕೊಳ್ಳೇಗಾಲ, ಹನೂರು ಹಾಗೂ ಯಳಂದೂರು ತಾಲೂಕುಗಳು ಒಳಪಡುವ ಕೊಳ್ಳೇಗಾಲ ಉಪ ವಿಭಾಗದ ವಿದ್ಯುತ್ ಪೂರೈಕೆ ಪರಿಸ್ಥಿತಿ ಹಾಗೂ ನಿರ್ವಹಣೆ, ಐಪಿ ಫೀಡರ್‍ಗಳಿಗೆ ವಿದ್ಯುತ್ ಪೂರೈಕೆ ಮತ್ತು ಗೃಹಜ್ಯೋತಿ ಯೋಜನೆ ಫಲಾನುಭವಿಗಳ ಮಾಹಿತಿ ಸಂಗ್ರಹಣೆ ಕುರಿತ ಪ್ರಗತಿ ಪರಿಶೀಲನೆ ನಡೆಸಿ, ಮಾಹಿತಿಗಳನ್ನು ಪಡೆದರು.
ರಾಜ್ಯದಲ್ಲಿ ವಿದ್ಯುತ್ ಲಭ್ಯತೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ, ಪ್ರಸ್ತುತ ಎದುರಾಗಿರುವ ವಿದ್ಯುತ್ ಲಭ್ಯತೆಯ ಕೊರತೆಯ ನಡುವೆಯೂ ಗ್ರಾಹಕರಿಗೆ ನೀಡುವ ವಿದ್ಯುತ್ ಸೇವೆಯಲ್ಲಿ ಹೆಚ್ಚಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಅಲ್ಲದೇ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಅಥವಾ ತಾಂತ್ರಿಕ ಸಮಸ್ಯೆಗಳು ಎದುರಾದಲ್ಲಿ ಅವುಗಳನ್ನು ತ್ವರಿತವಾಗಿ ಗುರುತಿಸಿ ಪರಿಹರಿಸಬೇಕು. ರೈತರ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ವಿದ್ಯುತ್ ಪೂರೈಕೆ ಹಾಗೂ ಗ್ರಾಮೀಣ ಪ್ರದೇಶಗಳ ವಿದ್ಯುತ್ ವ್ಯವಸ್ಥೆಯ ಮೇಲೂ ನಿರಂತರ ನಿಗಾವಹಿಸುವಂತೆ ವ್ಯವಸ್ಥಾಪಕ ನಿರ್ದೇಶಕರು ಸೂಚಿಸಿದರು.
ಪ್ರಸ್ತುತ ವಿದ್ಯುತ್ ಪೂರೈಕೆ ನಿರ್ವಹಣೆಯಲ್ಲಿ ಎದುರಾಗಿರುವ ಸವಾಲುಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಸಮರ್ಥವಾಗಿ ನಿಭಾಯಿಸಬೇಕು. ಗ್ರಾಹಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವುದರ ಜೊತೆಗೆ ವಿದ್ಯುತ್ ಪೂರೈಕೆಯ ಗುಣಮಟ್ಟದ ಬಗ್ಗೆ ನಿರಂತರ ಪರಿಶೀಲನೆ ನಡೆಸುವಂತೆ ಅವರು ತಿಳಿಸಿದರು.
ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹಣೆ ಕಾರ್ಯದ ಪ್ರಗತಿ ಪರಿಶೀಲಿಸಿದ ವ್ಯವಸ್ಥಾಪಕ ನಿರ್ದೇಶಕರು, ಮಾಹಿತಿ ಸಂಗ್ರಹಣೆಯನ್ನು ಇದೇ ತಿಂಗಳ ಅಂತ್ಯದೊಳಗೆ ತಪ್ಪದೇ ಪೂರ್ಣಗೊಳಿಸುವಂತೆ ಸೂಚಿಸಿದರು. ಬಾಕಿ ಉಳಿದಿರುವ ಕಾಮಗಾರಿಗಳು ಹಾಗೂ ಇತರೆ ಕೆಲಸಗಳನ್ನು ಯಾವುದೇ ರೀತಿಯ ವಿಳಂಬಕ್ಕೆ ಅವಕಾಶ ನೀಡದೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಎಸ್. ಅರ್ಚನಾ ಅವರು ನಿರ್ದೇಶನ ನೀಡಿದರು.
ಕೊಳ್ಳೇಗಾಲ ಉಪ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ತಬ್ಸುಮ್ ಸೇರಿದಂತೆ ಸೆಸ್ಕ್‍ನ ವಿವಿಧ ಅಧಿಕಾರಿಗಳು ಹಾಗೂ ರೈತ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net