ಶರಣರ ಚಿಂತನೆಗಳಿಂದ ಸಮಾನತೆ ಸಾಧ್ಯ

ಕೊಳ್ಳೇಗಾಲದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಶ್ರೀ ಶಿವಶರಣ ಹಡಪದ ಅಪ್ಪಣ್ಣ ಅವರ 892ನೇ ಜಯಂತಿ ಸಮಾರಂಭಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಚಾಲನೆ ನೀಡಿದರು. ರಾಜೇಂದ್ರ, ಇದ್ವಾಂಡಿ ಶಿವಣ್ಣ, ಕುಮಾರ್, ಇತರರು ಇದ್ದರು
ಕೊಳ್ಳೇಗಾಲದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಶ್ರೀ ಶಿವಶರಣ ಹಡಪದ ಅಪ್ಪಣ್ಣ ಅವರ 892ನೇ ಜಯಂತಿ ಸಮಾರಂಭಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಚಾಲನೆ ನೀಡಿದರು. ರಾಜೇಂದ್ರ, ಇದ್ವಾಂಡಿ ಶಿವಣ್ಣ, ಕುಮಾರ್, ಇತರರು ಇದ್ದರು
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎ.ಆರ್.ಕೃಷ್ಣಮೂರ್ತಿ ಅಭಿಪ್ರಾಯ
  • ಶ್ರೀ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ

ಕೊಳ್ಳೇಗಾಲ:

ಹಡಪದ ಅಪ್ಪಣ್ಣ ಅವರ ಕಾಯಕ ನಿಷ್ಠೆ ಮತ್ತು ಜೀವನ ನಮಗೆ ದಾರಿ ದೀಪ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಮಂಗಳವಾರ ಶ್ರೀ ಶಿವಶರಣ ಹಡಪದ ಅಪ್ಪಣ್ಣ ಅವರ 892ನೇ ಜಯಂತಿ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
12ನೇ ಶತಮಾನದ ಶರಣ ಪರಂಪರೆಯಲ್ಲಿ ಶಿವಶರಣ ಹಡಪದ ಅಪ್ಪಣ್ಣ ಅವರು ವಿಶಿಷ್ಟ ಸ್ಥಾನ ಪಡೆದಿದ್ದಾರೆ. ಸರಳ ಜೀವನ, ಕಾಯಕ ನಿಷ್ಠೆ ಹಾಗೂ ಸಾಮಾಜಿಕ ಸಮಾನತೆಯ ಸಂದೇಶದ ಮೂಲಕ ಸಮಾಜಕ್ಕೆ ಮಹತ್ವದ ಮಾರ್ಗದರ್ಶನ ನೀಡಿದ್ದಾರೆ ಎಂದರು.
ಶರಣರ ತತ್ವಗಳು ಇಂದಿಗೂ ಪ್ರಸ್ತುತವಾಗಿದೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಸಾಮರಸ್ಯ, ಸಹಬಾಳ್ವೆ ಹಾಗೂ ಸಮಾನತೆ ಬೆಳೆಸುವಲ್ಲಿ ಶರಣರ ಚಿಂತನೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಸಾಹಿತಿ ಹಿಂದ್ವಾಡಿ ಶಿವಣ್ಣ ಮಾತನಾಡಿ, ಕರ್ನಾಟಕ ಇತಿಹಾಸದಲ್ಲಿ 12 ಶತಮಾನ ಶ್ರೇಷ್ಠವಾದದ್ದು. ಅನುಭವ ಮಂಟಪದ ಸಂಸ್ಥಾಪಕ ಬಸವಣ್ಣ ಅವರ ನೆರಳಾಗಿದ್ದವರು ಮಹಾನ್ ಶರಣ ಹಡಪದ ಅಪ್ಪಣ್ಣ ಅವರ ವ್ಯಕ್ತಿತ್ವದ ಘನತೆಯನ್ನು ಮೈ-ಮನದಲ್ಲಿ ತುಂಬಿಕೊಳ್ಳಬೇಕು. ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಬೇಕು. ವಿದ್ಯೆಯಿಂದ ಮಾತ್ರ ಮಕ್ಕಳನ್ನು ಭವಿಷ್ಯ ರೂಪಿಸಲು ಸಾಧ್ಯ ಎಂಬುದನ್ನು ಪ್ರತಿಯೊಬ್ಬರು ತಿಳಿಯಬೇಕು. ಹಾಗೆ ದುಶ್ಚಟಗಳಿಂದ ದೂರ ಇರಬೇಕು ಎಂದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಸವಿತಾ ಸಮಾಜದ ಅಧ್ಯಕ್ಷ ರಾಚಶೆಟ್ಟಿ, ಸವಿತಾ ಸಮಾಜ ಮಹಿಳಾ ಸಂಘ ಅಧ್ಯಕ್ಷೆ ದೊಡ್ಡತಾಯಮ್ಮ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net