ಹೆಚ್ಚು ಮೊಬೈಲ್ ಬಳಕೆಯಿಂದ ಕಣ್ಣಿನ ಸಮಸ್ಯೆ

ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಉದ್ಯಮಿ ಅನೂಪ್ ಸಿಂಗ್, ಅನುಗ್ರಹ ಫೌಂಡೇಷನ್ ವತಿಯಿಂದ ಶನಿವಾರ ಕಣ್ಣಿನ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.
ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಉದ್ಯಮಿ ಅನೂಪ್ ಸಿಂಗ್, ಅನುಗ್ರಹ ಫೌಂಡೇಷನ್ ವತಿಯಿಂದ ಶನಿವಾರ ಕಣ್ಣಿನ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ಅರವಿಂದ ಕಣ್ಣಾಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಬಿ.ವಿಜಯಕಾಂತ್ ಹೇಳಿಕೆ
  • ನೇತ್ರ ತಪಾಸಣಾ ಶಿಬಿರ
ಗುಂಡ್ಲುಪೇಟೆ: ಪ್ರತಿಯೊಬ್ಬರೂ ಕಣ್ಣಿನ ಆರೋಗ್ಯದ ಬಗ್ಗೆ ಗಮನಹರಿಸಬೇಕು ಎಂದು ಅರವಿಂದ ಕಣ್ಣಾಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಬಿ.ವಿಜಯಕಾಂತ್ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಉದ್ಯಮಿ ಅನೂಪ್ ಸಿಂಗ್, ಅನುಗ್ರಹ ಫೌಂಡೇಷನ್ ವತಿಯಿಂದ ಶನಿವಾರ ಆಯೋಜಿಸಿದ್ದ ಕಣ್ಣಿನ ಉಚಿತ ತಪಾಸಣೆ ಶಿಬಿರದಲ್ಲಿ ಮಾತನಾಡಿದರು.
ಬದಲಾದ ಜೀವನಶೈಲಿ, ಆಹಾರ ಪದ್ಧತಿ ಹಾಗೂ ಅತಿಯಾದ ಮೊಬೈಲ್ ಬಳಕೆಯಿಂದ ಪ್ರತಿಯೊಬ್ಬರಿಗೂ ಕಣ್ಣಿನ ಸಮಸ್ಯೆಗಳು ಕಾಡುತ್ತಿವೆ. ಆಸ್ಪತ್ರೆಗಳಲ್ಲಿ ಕಣ್ಣಿನ ಚಿಕಿತ್ಸೆ ದುಬಾರಿಯಾಗುತ್ತಿದ್ದು ಬಡ ಹಾಗೂ ಮಧ್ಯಮ ವರ್ಗದ ಜನರು ಪಡೆದುಕೊಳ್ಳಲು ಸಾಧ್ಯವಾಗದೆ ದೃಷ್ಟಿ ನಾಶದ ಅಪಾಯದಲ್ಲಿ ಸಿಲುಕುತ್ತಿದ್ದಾರೆ. ಆದ್ದರಿಂದ ಸಂಘ, ಸಂಸ್ಥೆಗಳು ಹಾಗೂ ದಾನಿಗಳು ಆಯೋಜಿಸುವ ಶಿಬಿರಗಳಲ್ಲಿ ಉಚಿತ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಡಾ. ಗೊರಾಂಗ್, ಡಾ.ಡೆನ್ನಿ ಪ್ರಸಾದ್, ಡಾ.ಫೆಮಿನಾ ಸುಹಾನ್, ಡಾ.ಕಾಜೋಲ್ ಪಾಟೀಲ ಅವರ ತಂಡ 101 ಜನರನ್ನು ತಪಾಸಣೆ ಮಾಡಿ ಶಸ್ತ್ರ ಚಿಕಿತ್ಸೆ ಅಗತ್ಯವಿರುವ 37 ಜನರನ್ನು ಆಸ್ಪತ್ರೆಗೆ ಕರೆದೊಯ್ದರು.
ಅನುಗ್ರಹ ಸಂಸ್ಥೆಯ ಕೆ.ರಮೇಶ್, ರಾ.ಬಾಬು, ಮಲ್ಲು, ನಿರ್ದೇಶಕರಾದ ವೀರಭದ್ರಪ್ಪ, ಸಿದ್ದಪ್ಪ, ವೇಣುಗೋಪಾಲ, ಸುರೇಶ್, ಬಣಜಿಗ ಸಂಘದ ಶಿವಕುಮಾರ್, ಶ್ರೀನಿವಾಸ, ಜಯಶ್ರೀ ಇದ್ದರು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net