ಮುಖ್ಯಶಿಕ್ಷಕಿ ರತ್ನಮ್ಮಗೆ ಬೀಳ್ಕೊಡುಗೆ

 ಯಳಂದೂರು ತಾಲೂಕಿನ ದುಗ್ಗಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿಯಾಗಿ ನಿವೃತ್ತಿಯಾದ ಆರ್.ರತ್ನಮ್ಮ ಅವರನ್ನು ಈತ್ರೀ ಮೈತ್ರಿ ಬಳಗ ಹಾಗೂ ಶಿಕ್ಷಕರ ಬಳಗದಿಂದ ಸನ್ಮಾನಿಸಲಾಯಿತು. ಕೆ.ಜಯಶಂಕರ್, ಬಸವಣ್ಣ ಸೇರಿದಂತೆ ಇತರರು ಹಾಜರಿದ್ದರು.

Published on

ಯಳಂದೂರು:

ತಾಲೂಕಿನ ದುಗ್ಗಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಆರ್.ರತ್ನಮ್ಮ ಸೇವೆಯಿಂದ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಯಳಂದೂರು ತಾಲೂಕು ಈತ್ರೀ ಮೈತ್ರಿ ಬಳಗದ ಹಾಗೂ ಶಿಕ್ಷಕ ಬಳಗದ ವತಿಯಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು.

ಇತ್ತೀಚೆಗೆ ತಾಲೂಕಿನ ದುಗ್ಗಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಹಲವು ದಶಕಗಳ ಕಾಲ ಶಿಕ್ಷಕಿಯಾಗಿ , ಮುಖ್ಯಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನೂರಾರು ಮಕ್ಕಳ ಭವಿಷ್ಯ ರೂಪಿಸಿದ ರತ್ನಮ್ಮ ಅವರ ಸೇವೆಯನ್ನು ಸ್ಮರಿಸಿ ಅವರ ಮುಂದಿನ ನಿವೃತ್ತಿ ಜೀವನ ಸುಖ, ಶಾಂತಿ , ನೆಮ್ಮದಿಯಿಂದ ಕೂಡಿರಲಿ ಎಂದು ಹಾರೈಸಲಾಯಿತು.
ಸಮಾರಂಭದಲ್ಲಿ ಶಿಕ್ಷಕರಾದ ಕೆ.ಜಯಶಂಕರ್, ಕಿರಣ್‌ಕುಮಾರ್, ಲೀಲಾ, ಮಮತಾ, ಸುನೀಲ್ ದೇವ್, ವರದರಾಜು, ರಾಜೇಶ್, ಬಸವಣ್ಣ, ಅಂಬಳೆ ಮಹೇಶ್ ಸೇರಿದಂತೆ ಇತರರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net