ಕೆರೆಗಳಿಗೆ ನೀರು ತುಂಬಿಸಲು ರೈತರ ಒತ್ತಾಯ

ಗುಂಡ್ಲುಪೇಟೆ ತಾಲೂಕಿನ ಹುತ್ತೂರು ಏತನೀರಾವರಿ ಯೋಜನೆಯ ನಾಲ್ಕನೇ ಹಂತದ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರು ಪಾರ್ವತಿ ಬೆಟ್ಟದಲ್ಲಿ ಸಭೆ ನಡೆಸಿದರು.
ಗುಂಡ್ಲುಪೇಟೆ ತಾಲೂಕಿನ ಹುತ್ತೂರು ಏತನೀರಾವರಿ ಯೋಜನೆಯ ನಾಲ್ಕನೇ ಹಂತದ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರು ಪಾರ್ವತಿ ಬೆಟ್ಟದಲ್ಲಿ ಸಭೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • 17ರಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ

ಗುಂಡ್ಲುಪೇಟೆ :

ಹುತ್ತೂರು ಏತ ನೀರಾವರಿ ಯೋಜನೆಯ ನಾಲ್ಕನೇ ಹಂತದ ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ ಆ.17ರಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ಕೈಗೊಳ್ಳಲು ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರು ನಿರ್ಧರಿಸಿದ್ದಾರೆ.

ತಾಲೂಕಿನ ಸ್ಕಂದಗಿರಿ ಪಾರ್ವತಾಂಬ ಬೆಟ್ಟದಲ್ಲಿ ಗುರುವಾರ ಅಚ್ಚುಕಟ್ಟು ಪ್ರದೇಶದ ಕೊಡಸೋಗೆ, ಬೊಮ್ಮಲಾಪುರ, ಹುಂಡೀಪುರ, ಶಿವಪುರ, ಶಿಂಡನಪುರ ಹಾಗೂ ಅಣ್ಣೂರುಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಸಭೆ ನಡೆಸಿದರು. ಕಳೆದ ಮೂರು ವರ್ಷಗಳಿಂದ ವಡೆಯನಪುರ, ಬೊಮ್ಮಲಾಪುರ, ಕಲ್ಲುಕಟ್ಟೆ ಜಲಾಶಯ, ವಿಜಯಪುರ ಅಮಾನಿಕೆರೆಗಳಿಗೆ ನದಿಮೂಲದ ನೀರು ಹರಿಸದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿ ದಿನ ಕೊಳವೆಬಾವಿಗಳಲ್ಲಿ ನೀರಿನ ಲಭ್ಯತೆ ಕಡಿಮೆಯಾಗುತ್ತಿದ್ದು, ಈಗಾಗಲೇ ಬೆಳೆದ ಬೆಳೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಬೀದಿಗಿಳಿದು ಹೋರಾಟ ನಡೆಸಿದರೂ ಜನಪ್ರತಿನಿಧಿಗಳು ಭರವಸೆ ನೀಡುವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಆದ್ದರಿಂದ ಆ.17ರ ಸೋಮವಾರದಿಂದ ತಾಲೂಕು ಕಚೇರಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಳ್ಳುವ ಮೂಲಕ ಜಿಲ್ಲಾಡಳಿತದ ಗಮನ ಸೆಳೆಯಬೇಕಾಗಿದೆ. ಜನಪ್ರತಿನಿಧಿಗಳ ಮಾತಿನ ಮೇಲೆ ಭರವಸೆ ಕಳೆದುಕೊಂಡಿರುವುದರಿಂದ ಜಿಲ್ಲಾಧಿಕಾರಿಗಳೇ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ ನೀರು ಹರಿಸಲು ಕ್ರಮಕೈಗೊಳ್ಳುವವರೆಗೆ ಪ್ರತಿಭಟನೆ ಮುಂದುವರೆಸಬೇಕು ಎಂಬ ತೀರ್ಮಾನ ಕೈಗೊಂಡರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net