ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆಮರಿ ಸಾವು

ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ ಕೃಷ್ಣಯ್ಯನ ಕಟ್ಟೆ ಬಳಿ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಮರಿ ಸಾವನ್ನಪ್ಪಿರುವುದು.
ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ ಕೃಷ್ಣಯ್ಯನ ಕಟ್ಟೆ ಬಳಿ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಮರಿ ಸಾವನ್ನಪ್ಪಿರುವುದು.
Published on
ಯಳಂದೂರು: ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ ತೆರಳುವ ಕೃಷ್ಣಯ್ಯನ ಕಟ್ಟೆ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಮರಿ ಮೃತಪಟ್ಟಿದೆ.
ಬಿಆರ್‌ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶಕ್ಕೆ ಅತ್ತಿರದಲ್ಲೇ ಇರುವ ಕೃಷ್ಣಯ್ಯನ ಕಟ್ಟೆ ಬಳಿ ರಾಜ್ಯ ಹೆದ್ದಾರಿ ದಾಟುತ್ತಿದ್ದ ಜಿಂಕೆಮರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಮರಿ ಸ್ಥಳದಲ್ಲೇ ಮೃತಪಟ್ಟಿದೆ. ಈ ಸಂಬಂಧ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ಜಿಂಕೆಮರಿಯ ಕಳೇಬರವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ವಹಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net