ಪ್ರಥಮ ದರ್ಜೆ ಕಾಲೇಜು ಕಟ್ಟಡಕ್ಕೆ ಶೀಘ್ರದಲ್ಲೇ ಚಾಲನೆ

ಯಳಂದೂರು ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ವೈ.ಎಂ. ಮಲ್ಲಿಕಾರ್ಜುನ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಠ್ಯಪೂರಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಶಿಕ್ಷಣ ಮತ್ತು ಕ್ರೀಡೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಸಕ ಎ.ಆರ್. ಕೃಷ್ಣಮೂರ್ತಿ ಸನ್ಮಾನಿಸಿದರು. ಡಾ. ವಿಜಯ, ಎಚ್.ವಿ.ಚಂದ್ರು ಇತರರು ಇದ್ದರು.
ಯಳಂದೂರು ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ವೈ.ಎಂ. ಮಲ್ಲಿಕಾರ್ಜುನ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಠ್ಯಪೂರಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಶಿಕ್ಷಣ ಮತ್ತು ಕ್ರೀಡೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಸಕ ಎ.ಆರ್. ಕೃಷ್ಣಮೂರ್ತಿ ಸನ್ಮಾನಿಸಿದರು. ಡಾ. ವಿಜಯ, ಎಚ್.ವಿ.ಚಂದ್ರು ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವೈ.ಎಂ.ಮಲ್ಲಿಕಾರ್ಜುನಸ್ವಾಮಿ ಸಂಸ್ಥೆಗೆ ಸೌಕರ್ಯ
  • ಶಾಸಕ ಎ.ಆರ್.ಕೃಷ್ಣಮೂರ್ತಿ ಭರವಸೆ
ಯಳಂದೂರು: ಪಟ್ಟಣದಲ್ಲಿರುವ ವೈ.ಎಂ.ಮಲ್ಲಿಕಾರ್ಜುನಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.
ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ವೈ.ಎಂ. ಮಲ್ಲಿಕಾರ್ಜುನಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಪಠ್ಯಪೂರಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಈ ಕಾಲೇಜಿಗೆ ಸ್ವಂತ ಕಟ್ಟಡವಿಲ್ಲ. ಇಲ್ಲಿಗೆ ಕಟ್ಟಡ ನಿರ್ಮಾಣ ಮಾಡಲು ಜಾಗದ ಸಮಸ್ಯೆ ಇತ್ತು. ಈಗ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲೇ ಇದಕ್ಕೆ ಜಾಗ ಗುರುತಿಸಲಾಗಿದೆ. ನಾಲ್ಕು ಅಂತಸ್ತುಗಳ ಕಟ್ಟಡ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಮೊದಲ ಹಂತವಾಗಿ 2.5 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಆದಷ್ಟು ಬೇಗ ಇದಕ್ಕೆ ಚಾಲನೆ ನೀಡಲಾಗುವುದು ಎಂದರು.
ಗಾಯಕ, ಶಿಕ್ಷಕ ರವಿ ಕೊಮಾರನಪುರ ಮಾತನಾಡಿ, ನಾವು ಇಂದು ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ನಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಇಲ್ಲಿ ನುರಿತ ಶಿಕ್ಷಕರು, ಅಧ್ಯಾಪಕರು ಇರುತ್ತಾರೆ. ಸರ್ಕಾರದಿಂದ ಎಲ್ಲ ಸೌಲಭ್ಯಗಳು ದೊರೆಯುತ್ತದೆ. ವಿದ್ಯಾರ್ಥಿಗಳು ಪಠ್ಯದ ಜತೆ ನಮ್ಮ ಸಂಸ್ಕೃತಿಯನ್ನು ಅರಿಯಬೇಕು. ಸಾಂಸ್ಕೃತಿಕವಾಗಿ ಬದುಕು ಕಲಿತುಕೊಂಡರೆ ಜೀವನ ನಡೆಸುವುದು ಸುಲಭವಾಗುತ್ತದೆ ಎಂದರು.
ಪ್ರಾಂಶುಪಾಲ ಡಾ. ವಿಜಯ ಮಾತನಾಡಿ, ನಮ್ಮ ಕಾಲೇಜಿನಲ್ಲಿ ಈ ಸಾಲಿನಲ್ಲಿ ಉತ್ತಮ ಫಲಿತಾಂಶ ಬಂದಿದೆ. ಅಲ್ಲದೆ ನಮ್ಮ ಮಕ್ಕಳು ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರುತ್ತಿದ್ದಾರೆ. ನೂತನ ಕಟ್ಟಡಕ್ಕೆ ಶಾಸಕರು ಭರವಸೆ ನೀಡಿದ್ದು, ಒಂದೆರಡು ತಿಂಗಳಲ್ಲಿ ಇದಕ್ಕೆ ಚಾಲನೆ ನೀಡುವ ಸಾಧ್ಯತೆ ಇದೆ. ಈ ಕಟ್ಟಡ ಪೂರ್ಣಗೊಂಡರೆ ನಾವು ಇನ್ನಷ್ಟು ಸಾಧನೆ ಮಾಡಲಿದ್ದೇವೆ ಎಂದರು.
ಕ್ರೀಡೆ ಹಾಗೂ ಶಿಕ್ಷಣದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ತಾಲೂಕು ಅಧ್ಯಕ್ಷ ಎಸ್. ಪ್ರಭುಪ್ರಸಾದ್, ಸಮಾಜ ಸೇವಕ ಕಂದಹಳ್ಳಿ ನಂಜುಂಡಸ್ವಾಮಿ, ಬಿಳಿಗಿರಿ ದೇಗುಲ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜೆ. ಶ್ರೀನಿವಾಸ್, ಅಧ್ಯಾಪಕರಾದ ಮನೋಜ್ ಕುಮಾರ್, ಕೆ.ಶ್ವೇತಾ, ಎ.ವಾಸುದೇವ, ಎಂ.ವಿಕಾಸ್, ಎಂ. ಗಿರಿಜಾ, ಎಂ.ಜಿ.ಮುರುಳಿ, ಕೆ.ಎಂ.ವಿನೋದ್, ಗ್ರಂಥಪಾಲಕ ಎಚ್.ಎ.ಅರುಣ, ವಿದ್ಯಾರ್ಥಿ ಸಂಘದ ಎಂ.ನಾಗೇಂದ್ರ, ಸೈಯದ್ ಸಾಕೀಬ್, ಆರ್.ಅಜಯ್, ಅನನ್ಯ ಸೇರಿದಂತೆ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net