ಪ್ರತಿಟನ್ ಕಬ್ಬಿಗೆ 5 ಸಾವಿರ ರೂ.ನಿಗದಿ ಮಾಡಲಿ

ಯಳಂದೂರು ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಯಳಂದೂರು ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Published on
ಯಳಂದೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಗುರುವಾರ ಪಟ್ಟಣದ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಆ.25ರಂದು ರೈತರ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದೆವು. ಈ ವೇಳೆ ತಹಸೀಲ್ದಾರ್ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಸೆ.3ರೊಳಗೆ ಕರೆಸಿ ರೈತರೊಂದಿಗೆ ಚರ್ಚೆ ಮಾಡಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಈವರೆಗೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಘೋಷಣೆಗಳನ್ನು ಕೂಗಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಗೌಡಹಳ್ಳಿ ಸೋಮಣ್ಣ ಮಾತನಾಡಿ, ಕೆರೆ-ಕಟ್ಟೆಗಳ ಹೂಳು ತೆಗೆಸಬೇಕು, ಏತ ನೀರಾವರಿ ಯೋಜನೆಗೆ ಕೃಷ್ಣಯ್ಯನಕಟ್ಟೆ, ಗೌಡಹಳ್ಳಿ ಕೆರೆೆಗಳನ್ನು ಸೇರಿಸಬೇಕು. ಅಕ್ರಮ ಗಣಿಗಾರಿಕೆ ತಡೆಗಟ್ಟಬೇಕು. ವಿದ್ಯುತ್ ಸರಬರಾಜಿನಲ್ಲಿ ಆಗುತ್ತಿರುವ ಸಮಸ್ಯೆ ಬಗೆಹರಿಸಿ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು. ಇಲಾಖೆ ಅಧಿಕಾರಿಗಳು ರೈತರೊಂದಿಗೆ ಅನುಚಿತ ವರ್ತನೆ ಮಾಡುತ್ತಿದ್ದು ಇದು ನಿಲ್ಲಬೇಕು. ಪ್ರತಿಟನ್ ಕಬ್ಬಿಗೆ 5000 ರೂ.ನಿಗದಿ ಮಾಡಬೇಕು ಎಂದು ಒತ್ತಾಯಿಸಿದ್ದೆವು. ಆದರೆ, ಸಮಸ್ಯೆ ಆಲಿಸಲು ಯಾವೊಬ್ಬ ಅಧಿಕಾರಿಗಳು ಬಾರದ ಕಾರಣ ನಾಳೆಯೂ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.
ರೈತ ಮುಖಂಡರಾದ ಪ್ರಕಾಶ್, ಪುಟ್ಟಬುದ್ಧಿ, ನಾಗರಾಜು, ರಂಗಸ್ವಾಮಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net