ಮಹನೀಯರ ಆದರ್ಶಗಳನ್ನು ಅನುಸರಿಸಿ

ಹನೂರಿನಲ್ಲಿ ಆಯೋಜಿಸಿದ್ಧ  ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಾಸಕ ಎಂ.ಆರ್ ಮಂಜುನಾಥ್, ರಾಚಯ್ಯ, ಕೆ.ಎನ್ ಚೈತ್ರಾ, ಉಮೇಶ್, ಮಹೇಶ್, ಆನಂದಮೂರ್ತಿ ಇತರರಿದ್ದರು.
ಹನೂರಿನಲ್ಲಿ ಆಯೋಜಿಸಿದ್ಧ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಾಸಕ ಎಂ.ಆರ್ ಮಂಜುನಾಥ್, ರಾಚಯ್ಯ, ಕೆ.ಎನ್ ಚೈತ್ರಾ, ಉಮೇಶ್, ಮಹೇಶ್, ಆನಂದಮೂರ್ತಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಂ.ಆರ್.ಮಂಜುನಾಥ್ ಸಲಹೆ
  • ಗಣರಾಜ್ಯೋತ್ಸವ ಕಾರ್ಯಕ್ರಮ
ಹನೂರು: ದೇಶದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ದೊಡ್ಡದು. ಆದ್ದರಿಂದ ಪ್ರತಿಯೊಬ್ಬರೂ ಶೈಕ್ಷಣಿಕವಾಗಿ ಪ್ರಗತಿ ಹೊಂದಿ ದೇಶಕ್ಕೆ ಕೊಡುಗೆ ನೀಡಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.
ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಸೋಮವಾರ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶಕ್ಕೆ ಕೊಡುಗೆಯಾಗಿ ನೀಡಿರುವ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವಾದದ್ದು. ಇದರ ಆಶಯದಂತೆ ದೇಶವು ಗಣತಂತ್ರ ವ್ಯವಸ್ಥೆಯನ್ನು ಅಳವಡಿಸಿಕೊಂಡು ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದ ಮೂಲಕ ಆಡಳಿತ ನಡೆಸುತ್ತಿದೆ. ಇದರಿಂದ ಗಣತಂತ್ರ ವ್ಯವಸ್ಥೆಯನ್ನು ಬಲಗೊಳಿಸಲು ಸ್ಫೂರ್ತಿದಾಯಕವಾಗಿದೆ. ಸದೃಢ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಸಂವಿಧಾನವನ್ನು ಪಾಲಿಸಬೇಕು. ಹಾಗೆಯೇ ಮಹಾನ್ ನಾಯಕರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಸಾಧನೆಗೈದು ಕೊಡುಗೆ ನೀಡಬೇಕು ಎಂದು ತಿಳಿಸಿದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು: ಕ್ಷೇತ್ರವು ಭೌಗೋಳಿಕವಾಗಿ ವಿಸ್ತೀರ್ಣವಾಗಿದ್ದು, ಇಲ್ಲಿನ ಜನರು ವನ್ಯಜೀವಿ ಸಂಘರ್ಷದೊಂದಿಗೆ ಜೀವನ ನಡೆಸುತ್ತಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸುವುದು ಸವಾಲಿನ ಕೆಲಸ. ಇನ್ನು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಿದ್ದು, ಆಗಬೇಕಿರುವ ಕಾರ್ಯಕ್ಕೆ ರೂಪುರೇಷವನ್ನು ಸಿದ್ಧಪಡಿಸಲಾಗಿದೆ. ಈಗಾಗಲೇ ರೈತರ ಬಹು ದಿನಗಳ ಬೇಡಿಕೆಯ ಕನಸು ರಾಮನಗುಡ್ಡೆ ಕೆರೆಗೆ ಕಾವೇರಿ ನದಿ ಮೂಲದಿಂದ ನೀರು ತುಂಬಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹುಬ್ಬೆಹುಣಸೆ, ಉಡುತೊರೆ ಹಳ್ಳ ಜಲಾಶಯಕ್ಕೂ ಈ ಕಾರ್ಯವಾಗಲಿದ್ದು, ರೈತರು ಪ್ರಯೋಜನ ಪಡೆಯಲಿದ್ದಾರೆ. ತಾಲೂಕು ಪ್ರಜಾಸೌಧ ನಿರ್ಮಿಸುವ ಕಾರ್ಯ ಟೆಂಡರ್ ಪ್ರಕ್ರಿಯೆಯಲ್ಲಿದೆ. ಬಸ್ ಡಿಪೋ, ತಾಲೂಕು ಹಾಗೂ ಪಟ್ಟಣ ಪಂಚಾಯಿತಿ ಕಚೇರಿ ಕಟ್ಟಡ ನಿರ್ಮಾಣಕ್ಕೂ ಅಗತ್ಯ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಇದಕ್ಕೂ ಮೊದಲು ತಹಸೀಲ್ದಾರ್ ಕೆ.ಎನ್ ಚೈತ್ರಾ ಅವರು ಧ್ವಜಾರೋಹಣ ನೆರವೇರಿಸಿದರು. ವಿವಿಧ ಶಾಲೆಯ ವಿದ್ಯಾರ್ಥಿಗಳು ಪಥ ಸಂಚಲನದ ಮೂಲಕ ಗಣ್ಯರಿಗೆ ಗೌರವ ವಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ಎಲ್ಲೇಮಾಳ ಸರ್ಕಾರಿ ಶಾಲೆಯ ಪ್ರಭಾ, ತೇಜಸ್ಸು, ರಾಮಾಪುರ ಶಾಲೆಯ ಸಂಜನಾ ಹಾಗೂ ಪದವಿಯ ರಾಜ್ಯಶಾಸ್ತ್ರ ವಿಷಯದಲ್ಲಿ ಚಿನ್ನದ ಪದಕ ಪಡೆದ ಚನ್ನಾಲಿಂಗನಹಳ್ಳಿಯ ಚಂದನಾ ಇವರನ್ನು ಸನ್ಮಾನಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ರಾಚಯ್ಯ, ತಾಪಂ ಇಒ ಉಮೇಶ್, ಬಿಇಒ ಮಹೇಶ್, ಪಪಂ ಮುಖ್ಯಾಧಿಕಾರಿ ರೇಖಾ, ಇನ್‌ಸ್ಪೆಕ್ಟರ್ ಆನಂದಮೂರ್ತಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net