ಲೊಕ್ಕನಹಳ್ಳಿ ಬಳಿ ಕಾಡಿಗೆ ಬೆಂಕಿ

ಲೊಕ್ಕನಹಳ್ಳಿ ಬಳಿಯ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿರುವುದು.
ಲೊಕ್ಕನಹಳ್ಳಿ ಬಳಿಯ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿರುವುದು.
Published on
ಹನೂರು: ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಬಳಿ ಗುರುವಾರ ಬೆಂಕಿ ಕಾಣಿಸಿಕೊಂಡು ಅರಣ್ಯ ಪ್ರದೇಶ ನಾಶವಾಗಿದೆ.
ಮಧ್ಯಾಹ್ನ 1 ಗಂಟೆ ವೇಳೆಯಲ್ಲಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬಗ್ಗೆ ಮಾಹಿತಿ ತಿಳಿದ ಗಸ್ತಿನಲ್ಲಿದ್ದ ಸಿಬ್ಬಂದಿ ಅಧಿಕಾರಿಗಳ ಗಮನಕ್ಕೆ ತಂದು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಬಳಿಕ ಆರ್‌ಎಫ್‌ಒ ವಾಸು ಹಾಗೂ ಹೆಚ್ಚಿನ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಅರಣ್ಯ ಪ್ರದೇಶ ನಾಶವಾಗಿರುವ ಪ್ರಮಾಣದ ಬಗ್ಗೆ ಇಲಾಖೆ ಅಧಿಕಾರಿಗಳಿಂದ ತಿಳಿಯಬೇಕಿದೆ.
ವಾರದ ಹಿಂದೆ ಅರಣ್ಯ ಪ್ರದೇಶ ವ್ಯಾಪ್ತಿಯ ಗುಂಡಿಮಾಳ, ನೆಲ್ಲಿಕತ್ರಿ ಹಾಗೂ ಲೊಕ್ಕನಹಳ್ಳಿ ಭಾಗದ ಕೆಲವು ಕಡೆಗಳಲ್ಲಿ ಬೆಂಕಿ ಕಾಣಿಸಿಕೊಂಡು ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿತ್ತು. ಇದು ಕಿಡಿಗೇಡಿಗಳ ಕೃತ್ಯ ಎಂದು ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಈ ಭಾಗದ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದಂತೆ ಎಚ್ಚರ ವಹಿಸುವಂತೆ ಮನವಿ ಮಾಡಿದ್ದರು. ಇದೀಗ ಲೊಕ್ಕನಹಳ್ಳಿ ಬಳಿಯ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ನಾಶವಾಗಿರುವುದಕ್ಕೆ ಇಲಾಖೆ ಅಧಿಕಾರಿಗಳಲ್ಲಿ ಬೇಸರ ಮೂಡಿಸಿದೆ. ಇಂತಹ ಘಟನೆ ಮರುಕಳುಹಿಸುತ್ತಿರುವುದರಿಂದ ಪರಿಸರ ಪ್ರೇಮಿಗಳಿಂದ ಆಕ್ಷೇಪ ವ್ಯಕ್ತವಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net