1.55 ಕೋಟಿ ರೂ. ವೆಚ್ಚದ ಅಭಿವೃದ್ಧಿಗೆ ಶಂಕು

 ಯಳಂದೂರು ತಾಲೂಕಿನ ಗಣಿಗನೂರು ಗ್ರಾಮದ ಸೇತುವೆ ಕಾಮಗಾರಿಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಗುರುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಎಚ್.ವಿ. ಚಂದ್ರು, ಜೆ. ಯೋಗೇಶ್ ಇತರರು ಇದ್ದರು.
ಯಳಂದೂರು ತಾಲೂಕಿನ ಗಣಿಗನೂರು ಗ್ರಾಮದ ಸೇತುವೆ ಕಾಮಗಾರಿಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಗುರುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಎಚ್.ವಿ. ಚಂದ್ರು, ಜೆ. ಯೋಗೇಶ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸೇತುವೆ ಕಾಮಗಾರಿ ಶಾಸಕ ಎ.ಆರ್.ಕೃಷ್ಣಮೂರ್ತಿ ಭೂಮಿ ಪೂಜೆ
ಯಳಂದೂರು: ತಾಲೂಕಿನ ವಿವಿಧ ಗ್ರಾಮಗಳಲ್ಲಿ 1.55 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಗುರುವಾರ ಚಾಲನೆ ನೀಡಿದರು.
ತಾಲೂಕಿನ ಗಣಿಗನೂರು ಗ್ರಾಮದಲ್ಲಿ ಹಲವು ವರ್ಷಗಳಿಂದಲೂ ಗ್ರಾಮ ಪಂಚಾಯಿತಿ ಕೇಂದ್ರವಾಗಿರುವ ಯರಿಯೂರು ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿರುವ ಸುವರ್ಣಾವತಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣಕ್ಕೆ ಬೇಡಿಕೆ ಇಡಲಾಗಿತ್ತು. ಇದಕ್ಕಾಗಿ ಇಲ್ಲಿ ಸಂಕ ಸೇತುವೆ ನಿರ್ಮಾಣ ಮಾಡಲು 70 ಲಕ್ಷ ರೂ.ಮಂಜೂರು ಮಾಡಿಸಲಾಗಿದ್ದು, ಇದಕ್ಕೆ ಶುಕ್ರವಾರದಿಂದಲೇ ಚಾಲನೆ ನೀಡಲಾಗುವುದು ಎಂದು ಶಾಸಕರು ತಿಳಿಸಿದರು.
ಉಪ್ಪಿನ ಮೋಳೆ ಗ್ರಾಮದಲ್ಲಿ ಎರಡು ಕಡೆ ರಸ್ತೆ ಅಭಿವೃದ್ಧಿಗೆ ಒಟ್ಟು 50 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಈ ಕೆಲಸಕ್ಕೂ ಚಾಲನೆ ನೀಡಲಾಗಿದೆ. ಗುಂಬಳ್ಳಿ ಗ್ರಾಮದ ಪರಿಶಿಷ್ಟ ಜಾತಿಯ ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ. ಹಾಗೂ ಯರಗಂಬಳ್ಳಿ ಗ್ರಾಮದ ರಸ್ತೆ ವಾಲ್ಮೀಕಿ ಭವನಕ್ಕೆ 25 ಲಕ್ಷ ರೂ. ಹಣ ನೀಡಲಾಗಿದೆ. ಇದರೊಂದಿಗೆ ಇದೇ ಗ್ರಾಮದಲ್ಲಿ ಪಿಎಂಶ್ರೀ ಶಾಲೆಯ ಹೆಚ್ಚುವರಿ ಕೊಠಡಿಗೆ 13 ಲಕ್ಷ ರೂ. ವೆಚ್ಚದ ಕಾಮಗಾರಿಗೂ ಚಾಲನೆ ನೀಡಲಾಗಿದೆ. ಇದರೊಂದಿಗೆ ಕೃಷ್ಣಾಪುರ ಮಾರ್ಗವಾಗಿ ಗಣಿಗನೂರು ಗ್ರಾಮದ ಮಾರ್ಗದ ರಸ್ತೆ ಅಭಿವೃದ್ಧಿಗೆ 4 ಕೋಟಿ ರೂ. ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈ ಕಾಮಗಾರಿ ಶೀಘ್ರದಲ್ಲೇ ಆರಂಭಗೊಳ್ಳಲಿದೆ. ಶಿವಕಳ್ಳಿಯಿಂದ ಕುಣಗಳ್ಳಿ ವರೆಗಿನ ಆಯ್ದ ಭಾಗಗಳ ರಸ್ತೆ ಅಭಿವೃದ್ಧಿಗೆ 5 ಕೋಟಿ ರೂ. ಹಣ ಬಿಡುಗಡೆಯಾಗಿದೆ. ಈ ಕೆಲಸವೂ ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು ಮಾತನಾಡಿ, ಶಾಸಕರ ಅವಧಿಯಲ್ಲಿ 500 ಕೋಟಿ ರೂ.ಗೂ ಹೆಚ್ಚು ಅನುದಾನದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಇದರಲ್ಲಿ ಆಸ್ಪತ್ರೆ, ನೀರಾವರಿ, ನಗರ, ಪಟ್ಟಣ ಗ್ರಾಮೀಣ ಭಾಗದ ಬೀದಿಗಳ ರಸ್ತೆ, ಚರಂಡಿ ಅಭಿವೃದ್ಧಿ, ಸರ್ವ ಧರ್ಮ, ಜಾತಿಯ ಸಮುದಾಯ ಭವನಗಳು, ಲೋಕೋಪಯೋಗಿ ರಸ್ತೆಗಳು, ನೀರಾವರಿ, ರೇಷ್ಮೆ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನವನ್ನು ನೀಡಿದ್ದಾರೆ. ಇನ್ನುಳಿದ ಅವಧಿಯಲ್ಲೂ ಇವರಿಂದ ಇನ್ನಷ್ಟು ಅಭಿವೃದ್ದಿ ಕೆಲಸಗಳು ನಡೆಯುವುದರಲ್ಲಿ ಯಾವುದೇ ಅನುದಾನವಿಲ್ಲ ಎಂದರು.
ಜಿಪಂ ಮಾಜಿ ಉಪಾಧ್ಯಕ್ಷ ಜೆ.ಯೋಗೇಶ್, ಸಿಪಿಐ ಸುಬ್ರಹ್ಮಣ್ಯ, ಲೋಕೋಪಯೋಗಿ ಇಲಾಖೆಯ ಎಇಇ ಕುಮಾರ್, ಜೆಇ ಜಯಶ್ರೀ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net