ಏ.4ರಂದು ಕೊಯಮತ್ತೂರಿನ ಅರವಿಂದ ಕಣ್ಣಾಸ್ಪತ್ರೆ ತಜ್ಞ ವೈದ್ಯರಿಂದ
ಗುಂಡ್ಲುಪೇಟೆ: ಪಟ್ಟಣದ ಮಡಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಏ.4ರಂದು ಕೊಯಮತ್ತೂರಿನ ಅರವಿಂದ ಕಣ್ಣಾಸ್ಪತ್ರೆ ತಜ್ಞ ವೈದ್ಯರಿಂದ ಕಣ್ಣಿನ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.
ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ಉದ್ಯಮಿ ಅಜರ್ ಪಾಶಾ ಹಾಗೂ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಗಳ ಸಹಯೋಗದಲ್ಲಿ ಶಿಬಿರ ಆಯೋಜಿಸಲಾಗಿದ್ದು, ಅಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.
ಪೊರೆ, ಗ್ಲಾಕೋಮಾ, ನೀರು ಸೋರುವಿಕೆ, ಗೀಜು ಬರುವುದು, ಹತ್ತಿರ ಮತ್ತು ದೂರದೃಷ್ಟಿ ದೋಷ, ವಾರೆಕಣ್ಣು, ರಾತ್ರಿ ಕುರುಡುತನ ತಪಾಸಣೆ ನಡೆಸಲಾಗುವುದು. ಸ್ಥಳದಲ್ಲಿಯೇ ರಿಯಾಯಿತಿ ದರದಲ್ಲಿ ಕನ್ನಡಕ ಕೊಡಲಾಗುವುದು.
ಶಸ್ತ್ರಚಿಕಿತ್ಸೆ ಅಗತ್ಯವಿರುವವರನ್ನು ಕೊಯಮತ್ತೂರಿಗೆ ಕರೆದೊಯ್ದು ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಆದ್ದರಿಂದ ಕಣ್ಣಿನ ತೊಂದರೆಯಿರುವವರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅನುಗ್ರಹ ಸಂಸ್ಥೆಯ ಸಂಯೋಜಕ ಕೆ.ರಮೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.