ಇದರಲ್ಲಿ ಕಣ್ಣಿನ ಸಮಸ್ಯೆಗಳಾದ ಪೊರೆ, ಗ್ಲಾಕೋಮಾ, ನೀರು ಸೋರುವಿಕೆ, ಗೀಜು ಬರುವುದು, ಹತ್ತಿರ ಮತ್ತು ದೂರದೃಷ್ಟಿ ದೋಷ, ವಾರೆಕಣ್ಣು, ರಾತ್ರಿ ಕುರುಡುತನ ಇವುಗಳ ಬಗ್ಗೆ ತಪಾಸಣೆ ನಡೆಸಲಾಗುವುದು. ಸ್ಥಳದಲ್ಲಿಯೇ ರಿಯಾಯಿತಿ ದರದಲ್ಲಿ ಕನ್ನಡಕಗಳನ್ನು ಕೊಡಲಾಗುವುದು. ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ಕೊಯಮತ್ತೂರಿಗೆ ಕರೆದೊಯ್ದು ಉಚಿತವಾಗಿ ಚಿಕಿತ್ಸೆ ನೀಡಲಾಗುವುದು.