ಖರೀದಿಸಿದ ವಸ್ತುಗಳಿಗೆ ಬಿಲ್ ಪಡೆಯಿರಿ

ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಎಂ.ಎಸ್.ತನ್ಮಯಿ ಉದ್ಘಾಟಿಸಿದರು. ಎಂ.ಟಿ.ದೀಪು, ಎಂ.ಎಸ್.ತನ್ಮಯಿ, ಷಣ್ಮುಖ, ವೆಂಕಟೇಶ್, ಜವರಾಜು ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ನ್ಯಾಯಾಧೀಶ ಎಂ.ಟಿ.ದೀಪು ಸಲಹೆ
  • ಕಾನೂನು ಅರಿವು ಕಾರ್ಯಕ್ರಮ
ಗುಂಡ್ಲುಪೇಟೆ: ಗ್ರಾಹಕರು ಮಾರುಕಟ್ಟೆಯಲ್ಲಿ ತಾವು ಖರೀದಿಸುವ ಯಾವುದೇ ವಸ್ತುಗಳ ಬಗ್ಗೆ ಜಾಗೃತಿಯಿಂದ ಇರಬೇಕು ಎಂದು ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಎಂ.ಟಿ.ದೀಪು ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗ್ರಾಹಕರಿಗೆ ಅನ್ಯಾಯವಾಗುವುದನ್ನು ತಪ್ಪಿಸಲು ಗ್ರಾಹಕ ಹಕ್ಕು ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಗ್ರಾಹಕರು ತಾವು ಖರೀದಿಸಿದ ವಸ್ತುಗಳಿಗೆ ಬಿಲ್ ಪಡೆದು ಕಾನೂನಿನ ರಕ್ಷಣೆ ಪಡೆದುಕೊಳ್ಳಬಹುದು. ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಗ್ರಾಹಕ ಹಕ್ಕುಗಳ ನ್ಯಾಯಾಲಯಗಳನ್ನು ತೆರೆಯಲಾಗಿದ್ದು ಕಾನೂನು ಸೇವಾ ಸಮಿತಿಯು ಉಚಿತ ಕಾನೂನು ನೆರವು ನೀಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಎಂ.ಎಸ್.ತನ್ಮಯಿ, ತಾಲೂಕು ಪಂಚಾಯಿತಿ ಇಒ ಷಣ್ಮುಖ, ವಕೀಲರ ಸಂಘದ ಅಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ಜವರಾಜು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net