ಎರಡ್ಮೂರು ತಿಂಗಳಿಗೊಮ್ಮೆ ಕಣ್ಣೀನ ತಪಾಸಣೆ ಮಾಡಿಸಿಕೊಳ್ಳಿ

 ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ಇನ್ಫಿನಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೆಎಸ್‌ಬಿ ಪ್ರತಿಷ್ಠಾನದ ವತಿಯಿಂದ ಶನಿವಾರ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಡಿ.ಮಂಜುನಾಥ್, ಎಸ್.ಶಶಿಕುಮಾರ್, ಡಾ.ಜಸ್ನಾ, ಡಾ.ಮೇಘನಾ, ಡಾ.ವನ್ಶಿಕಾ, ಲೇಖನಾ ಇದ್ದರ.
ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ಇನ್ಫಿನಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೆಎಸ್‌ಬಿ ಪ್ರತಿಷ್ಠಾನದ ವತಿಯಿಂದ ಶನಿವಾರ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಡಿ.ಮಂಜುನಾಥ್, ಎಸ್.ಶಶಿಕುಮಾರ್, ಡಾ.ಜಸ್ನಾ, ಡಾ.ಮೇಘನಾ, ಡಾ.ವನ್ಶಿಕಾ, ಲೇಖನಾ ಇದ್ದರ.
Published on

ಪ್ರಮುಖ ಮುಖ್ಯಾಂಶಗಳು

  • ಉಚಿತ ನೇತ್ರ ತಪಾಸಣಾ ಶಿಬಿರ
  • ಡಿ.ಮಂಜುನಾಥ್ ಸಲಹೆ
ಚಾಮರಾಜನಗರ: ಪ್ರತಿಯೊಬ್ಬರು ಎರಡ್ಮೂರು ತಿಂಗಳಿಗೆ ಒಂದು ಬಾರಿ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಇನ್ಫಿನಿಟಿ ಸಂಸ್ಥೆಯ ಆಡಳಿತಾಧಿಕಾರಿ ಡಿ.ಮಂಜುನಾಥ್ ತಿಳಿಸಿದರು.
ತಾಲೂಕಿನ ಸಂತೇಮರಹಳ್ಳಿಯ ಇನ್ಫಿನಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೆಎಸ್‌ಬಿ ಪ್ರತಿಷ್ಠಾನದ ವತಿಯಿಂದ ಶನಿವಾರ ಆಯೋಜಿಸಿದ್ದ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
ಇಂದಿನ ಒತ್ತಡದ ಜೀವನ, ಆಹಾರ ಕ್ರಮದಿಂದ ನಿತ್ಯ ಆರೋಗ್ಯದಲ್ಲಿ ಒಂದಲ್ಲ ಒಂದು ಸಮಸ್ಯೆ ಕಾಣುತ್ತಿದ್ದೇವೆ. ಪ್ರತಿಯೊಬ್ಬರು ಎರಡ್ಮೂರು ತಿಂಗಳಿಗೆ ಒಂದು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ದೇಹದ ಆರೋಗ್ಯ ರಕ್ಷಣೆಯ ಜತೆಗೆ ಕಣ್ಣಿನ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಜೆಎಸ್‌ಬಿ ಪ್ರತಿಷ್ಠಾನದ ಎಸ್.ಶಶಿಕುಮಾರ್ ಮಾತನಾಡಿ, ನಮ್ಮ ಸಂಸ್ಥೆಯು ಹಲವಾರು ವರ್ಷಗಳಿಂದ ನಿರಂತರವಾಗಿ ಜಿಲ್ಲಾದ್ಯಂತ ವಿವಿಧ ಮಾದರಿಯ ಆರೋಗ್ಯ ತಪಾಸಣಾ ಶಿಬಿರಗಳನ್ನು ಮಾಡುತ್ತಿದ್ದು, ನೂರಾರು ಜನರಿಗೆ ಚಿಕಿತ್ಸೆ ಹಾಗೂ ಔಷಧ ನೀಡಿ ಸಾಮಾಜಿಕವಾಗಿ ಸ್ಪಂದಿಸುವ ಕೆಲಸ ಮಾಡುತ್ತಿದೆ. ಜನರು ಇವುಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಚಾಮರಾಜನಗರ ವೈದ್ಯಕೀಯ ಮಹಾವಿದ್ಯಾಲಯದ ನೇತ್ರ ತಜ್ಞೆ ಡಾ ಕಾವ್ಯ ಮಾತನಾಡಿ, ಕಣ್ಣು ಮಾನವನ ದೇಹದ ಅತೀ ಸೂಕ್ಷ್ಮವಾದ ಅಂಗ. ಇದನ್ನು ಅತೀ ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು. ಬಡ ಜನರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರಗಳು ಅನುಕೂಲವಾಗಿವೆ ಎಂದು ತಿಳಿಸಿದರು.
ಶಿಬಿರದಲ್ಲಿ ಸುಮಾರು 40 ಜನರಿಗೆ ಔಷಧ, ಕನ್ನಡಕವನ್ನು ವಿತರಿಸುವುದರ ಜತೆಗೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದವರನ್ನು ನೊಂದಣಿ ಮಾಡಿಕೊಳ್ಳಲಾಯಿತು. ಚಾಮರಾಜನಗರ ವೈದ್ಯಕೀಯ ಸಂಸ್ಥೆಯ ವೈದ್ಯರಾದ ಡಾ.ಜಸ್ನಾ, ಡಾ.ಮೇಘನಾ, ಡಾ.ವನ್ಶಿಕಾ, ನೇತ್ರ ತಪಾಸಕರಾದ ಲೇಖನಾ, ವೈದ್ಯಕೀಯ ವಿದ್ಯಾರ್ಥಿಗಳಾದ ರೀನಾ, ಸಂಯುಕ್ತಾ, ಶಾಲೆಯ ಸಿಬ್ಬಂದಿ ಬೆಳ್ಳಪ್ಪ, ಮಣಿಕಂಠ, ಶಾಂತಕುಮಾರ, ಮಹದೇವಮ್ಮ, ವಸಂತ, ನೀಲಮ್ಮ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net