ಸ್ಥಳಕ್ಕೆ ಆಗಮಿಸಿ ಜಿಲ್ಲಾಧಿಕಾರಿ ಶ್ರೀರೂಪಾ ಮಾತನಾಡಿ, ಜಿಲ್ಲೆಗೆ ಒಳ್ಳೆಯ ಯೋಜನೆಗಳು ಬರಬೇಕು. ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶ ಹತ್ತಿರದಲ್ಲೇ ಇರುವುದರಿಂದ ಮೇಲ್ಸೇತುವೆ ನಿರ್ಮಾಣವಾದರೆ ಅನುಕೂಲವಾಗಲಿದೆ. ಗ್ರಾಮಸ್ಥರು ರೈಲ್ವೆ ಅಂಡರ್‌ಪಾಸ್ ನಿರ್ಮಾಣ ಮಾಡಿಕೊಡಿ ಎಂದು ಕೇಳಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಾನು ರೈಲ್ವೆ ಇಲಾಖೆಗೆ ಪತ್ರ ಬರೆದಿದ್ದೇನೆ. ರೈಲ್ವೆ ಸಚಿವ ವಿ.ಸೋಮಣ್ಣ ಅವರೊಂದಿಗೆ ಮಾತನಾಡಿದ್ದೇನೆ. ಅಂಡರ್‌ಪಾಸ್ ನಿರ್ಮಾಣ ಮಾಡಿಕೊಡುವ ಭರವಸೆ ಇದೆ ಎಂದರು. ಇದಕ್ಕೆ ಪ್ರತಿಭಟನಾಕಾರರು ಪ್ರತಿಕ್ರಿಯಿಸಿ, ಮೌಖಿಕವಾಗಿ ಭರವಸೆ ಕೊಡುವ ಬದಲು ಲಿಖಿತವಾಗಿ ಪತ್ರದಲ್ಲಿ ಅಂಡರ್‌ಪಾಸ್ ನಿರ್ಮಾಣ ಮಾಡಿಕೊಡುವುದಾಗಿ ಬರೆದು ಕೊಡಿ. ಪ್ರತಿಭಟನೆ ಕೈಬಿಡುತ್ತೇವೆ ಎಂದರು. ಇದಕ್ಕೆ ಅಧಿಕಾರಿಗಳಿಂದ ಉತ್ತರ ಸಿಗದ ಹಿನ್ನೆಲೆಯಲ್ಲಿ ಬುಧವಾರದಿಂದ ಗ್ರಾಮದಲ್ಲೇ ತಮ್ಮ ಹೋರಾಟವನ್ನು ಮುಂದುವರೆಸಲು ನಿರ್ಧರಿಸಲಾಯಿತು. ಪಣ್ಯದಹುಂಡಿ, ಬದನಗುಪ್ಪೆ, ಮೇಲಾಜಿಪುರ, ಹೆಗ್ಗೋಠಾರ, ಮರಳ್ಳಿಪುರ, ಸುತ್ತಮುತ್ತಲಿನ ಗ್ರಾಮಸ್ಥರು ಮತ್ತು ಗುಂಡ್ಲುಪೇಟೆ ತಾಲೂಕು ರೈತ ಸಂಘದ ಸದಸ್ಯರು ಪಾಲ್ಗೊಂಡಿದ್ದರು.