ಮಣ್ಣು-ನೀರಿನ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ

 ಎಂ.ಟಿ ದೊಡ್ಡಿ ಗ್ರಾಮದಲ್ಲಿ ಆಯೋಜಿಸಿದ್ಧ ಜಲಾನಯನ ಮಹೋತ್ಸವ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಗಸ್ವಾಮಿ ಮಾತನಾಡಿದರು. ರೇವತಿ, ಮನೋಹರ್, ಚಿಕ್ಕರಾಜು ಇತರರು ಇದ್ದರು.
ಎಂ.ಟಿ ದೊಡ್ಡಿ ಗ್ರಾಮದಲ್ಲಿ ಆಯೋಜಿಸಿದ್ಧ ಜಲಾನಯನ ಮಹೋತ್ಸವ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಗಸ್ವಾಮಿ ಮಾತನಾಡಿದರು. ರೇವತಿ, ಮನೋಹರ್, ಚಿಕ್ಕರಾಜು ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಗಸ್ವಾಮಿ ಹೇಳಿಕೆ
  • ಜಲಾನಯನ ಮಹೋತ್ಸವ
ಹನೂರು: ಮಣ್ಣು ಹಾಗೂ ನೀರಿನ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಜಲಾನಯನ ಪ್ರದೇಶ ಅಭಿವೃದ್ಧಿ ಪಡಿಸಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಗಸ್ವಾಮಿ ತಿಳಿಸಿದರು.
ತಾಲೂಕಿನ ರಾಮಾಪುರ ಹೋಬಳಿ ವ್ಯಾಪ್ತಿಯ ಎಂ.ಜಿ. ದೊಡ್ಡಿ ಗ್ರಾಮದಲ್ಲಿ ಶನಿವಾರ ಜಲಾನಯನ ಅಭಿವೃದ್ಧಿ ಇಲಾಖೆ ಹಾಗೂ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಜಲಾನಯನ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಣ್ಣು ಹಾಗೂ ನೀರಿನ ಸಂರಕ್ಷಣಾ ಕ್ರಮಗಳನ್ನು ಪ್ರೋತ್ಸಾಹಿಸುವುದು. ಹಾನಿಗೊಳಗಾದ ಜಲಾನಯನ ಪ್ರದೇಶಗಳನ್ನು ಪುನರುಜ್ಜೀವನಗೊಳಿಸುವುದು. ಜಲಾನಯನ ಪ್ರದೇಶದ ಅಭಿವೃದ್ಧಿ ಕಾರ್ಯದಲ್ಲಿ ಜನರನ್ನು ತೊಡಗಿಸಿಕೊಳ್ಳುವುದು ಹಾಗೂ ಗ್ರಾಮೀಣ ಜನರ ಜೀವನೋಪಾಯವನ್ನು ಸುಧಾರಿಸುವುದು. ಜಲಾನಯನ ಮಹೋತ್ಸವದ ಉದ್ದೇಶವಾಗಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಮನದಟ್ಟು ಮಾಡಿಕೊಂಡು ಮಣ್ಣು ಹಾಗೂ ನೀರಿನ ಸಂರಕ್ಷಣೆಗೆ ಕಡೆ ಹೆಚ್ಚಿನ ಒತ್ತು ನೀಡಬೇಕು. ಇದರಿಂದ ಜಲಾನಯನ ಪ್ರದೇಶ ಅಭಿವೃದ್ಧಿಯಿಂದಾಗಿ ಅಂತರ್ಜಲ ಮಟ್ಟ ಸುಧಾರಣೆಯಾಗುತ್ತದೆ. ಕೃಷಿಯಲ್ಲಿ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ನಿಶಾಂತ್ ಅವರು ಕಾರ್ಯಕ್ರಮದ ರೂಪುರೇಷದ ಬಗ್ಗೆ ರೈತರಿಗೆ ಮಾಹಿತಿ ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ರೇವತಿ, ರೈತ ಸಂಘದ ತಾಲೂಕು ಅಧ್ಯಕ್ಷ ಚಿಕ್ಕರಾಜು, ಕೃಷಿ ಅಧಿಕಾರಿ ಮನೋಹರ್, ಪಿಡಿಒ ಆಕಾಶ್, ಕೃಷಿ ಇಲಾಖೆಯ ನೌಕರರಾದ ರಮೇಶ್, ಪ್ರಕಾಶ್, ಉಪೇಂದ್ರ, ಧರ್ಮೇಂದ್ರ, ವಿನಯ್, ಆಕಾಶ್, ಸಂತೋಷ್, ಪ್ರತಿಮಾ ಹಾಗೂ ಇನ್ನಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net