ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜ.21 ಬೆಳಗ್ಗೆ 10.30 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಸುನೀಲ್‌ಬೋಸ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್‌ಪ್ರಸಾದ್, ಎಂ.ಆರ್.ಮಂಜುನಾಥ್, ವಿಧಾನಪರಿಷತ್ ಸದಸ್ಯರಾದ ವಿವೇಕಾನಂದ, ಡಾ.ತಿಮ್ಮಯ್ಯ, ಜಿಲ್ಲಾಧಿಕಾರಿ ಶ್ರೀರೂಪಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾರೋತ್ ಹಾಗೂ ಇತರರು ಭಾಗವಹಿಸುವರು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.