ವಸತಿ ರಹಿತರಿಗೆ ಮನೆ ನಿರ್ಮಾಣ

ಗುಂಡ್ಲುಪೇಟೆ ತಾಲೂಕಿನ ಕಗ್ಗಳ ಗ್ರಾಮದಲ್ಲಿ ವಸತಿರಹಿತ ಬಡವರಿಗೆ ಮನೆ ನಿರ್ಮಾಣ ಕಾಮಗಾರಿಗೆ ದಿನೇಶ್ ಭೂಮಿ ಪೂಜೆ ನೆರವೇರಿಸಿದರು. ಚಂದ್ರಶೇಖರ್, ಮುಖೇಶ್, ನಾಗೇಶ್, ಸಿದ್ದಶೆಟ್ಟಿ ಇತರರು ಇದ್ದರು.
ಗುಂಡ್ಲುಪೇಟೆ ತಾಲೂಕಿನ ಕಗ್ಗಳ ಗ್ರಾಮದಲ್ಲಿ ವಸತಿರಹಿತ ಬಡವರಿಗೆ ಮನೆ ನಿರ್ಮಾಣ ಕಾಮಗಾರಿಗೆ ದಿನೇಶ್ ಭೂಮಿ ಪೂಜೆ ನೆರವೇರಿಸಿದರು. ಚಂದ್ರಶೇಖರ್, ಮುಖೇಶ್, ನಾಗೇಶ್, ಸಿದ್ದಶೆಟ್ಟಿ ಇತರರು ಇದ್ದರು.
Published on
ಗುಂಡ್ಲುಪೇಟೆ : ಸಮಾಜದಲ್ಲಿ ನಮಗೆ ಸ್ಪಂದಿಸುವವರು ಯಾರೂ ಇಲ್ಲ ಎಂಬ ಅನಾಥ ಭಾವನೆ ಕಡು ಬಡವರಿಗೆ ಬರಬಾರದು ಎಂಬ ಉದ್ದೇಶದಿಂದ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯು ಮನೆ ನಿರ್ಮಿಸಿಕೊಡುವ ಮೂಲಕ ನೆರವಾಗುತ್ತಿದೆ ಎಂದು ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಹೇಳಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ಕಗ್ಗಳ ಗ್ರಾಮದಲ್ಲಿ ವಸತಿ ರಹಿತರಿಗೆ ಮನೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸಂಸ್ಥೆಯು ಬಡವರಿಗೆ ಪ್ರತಿ ತಿಂಗಳು ಒಂದು ಸಾವಿರ ರೂಪಾಯಿಗಳ ಮಾಸಾಶನ, ಪೌಷ್ಟಿಕ ಆಹಾರ, ವಾತ್ಸಲ್ಯ ಕಿಟ್ ನೀಡಲಾಗುತ್ತಿದೆ. ವಾತ್ಸಲ್ಯ ಯೋಜನೆಯಲ್ಲಿ ಆಯ್ಕೆಯಾದ ಪಲಾನುಭವಿಗಳ ಮನೆಗೆ ಶೌಚಗೃಹ ಕಟ್ಟಿಕೊಡುವುದು, ಮನೆ ರಿಪೇರಿ ಮಾಡಿಸುವುದು, ಬಿಸಿನೀರಿಗೆ ಸೋಲಾರ್ ಅಡವಡಿಕೆ ಮಾಡಿಕೊಡುವ ಮೂಲಕ ಆತ್ಮಸ್ಥೈರ್ಯ ತುಂಬಲಾಗುತ್ತಿದೆ. ಕಟ್ಟ ಕಡೆಯ ವ್ಯಕ್ತಿಗಳೂ ಸಮಾಜದಲ್ಲಿ ಗೌರವಯುತವಾಗಿ ಬದುಕಲು ಸಂಸ್ಥೆ ಶ್ರಮಿಸುತ್ತಿದೆ ಎಂದು ಅವರು ಹೇಳಿದರು. ತಾಲೂಕು ಯೋಜನಾಧಿಕಾರಿ ಚಂದ್ರಶೇಖರ್, ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಮುಖೇಶ್, ತಾಲೂಕು ಸಮನ್ವಯಾಧಿಕಾರಿ ಚೈತ್ರಾ, ಕೆಲಸೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗೇಶ್, ಅರ್ಚಕ ನಾಗೇಂದ್ರ, ಮುಖಂಡರಾದ ಸ್ವಾಮಿ, ಸಿದ್ದಶೆಟ್ಟಿ, ಸಿದ್ದರಾಜು, ರಂಗಸ್ವಾಮಿ, ಸೇವಾ ಪ್ರತಿನಿಧಿಗಳಾದ ಸುನಿತಾ ಮತ್ತು ಮಹಾದೇವಮ್ಮ, ಮೇಲ್ವಿಚಾರಕಿ ರಾಜೇಶ್ವರಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net