ಆದರೆ ಮಂಗಳವಾರ ಬೆಳಗ್ಗೆ 8.10 ಗಂಟೆಗೆ ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಬಳಿಯಿರುವ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮದ್ದಾನೇಶ್ವರ ಶಾಲೆ, ದೊಡ್ಡಹುಂಡಿ ಭೋಗಪ್ಪ ಕಿರಿಯ ಕಾಲೇಜು ಹಾಗೂ ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ತರಗತಿಗೆ ಹೋಗುವ ಸಮಯದಲ್ಲಿ ನಿರ್ಬಂಧ ಉಲ್ಲಂಘಿಸಿ ಕಲ್ಲು ಸಾಗಣೆ ಮಾಡುತ್ತಿದ್ದ 6 ಟಿಪ್ಪರ್‌ಗಳನ್ನು ಸರ್ಕಲ್ ಇನ್ಸ್‌ಪೆಕ್ಟರ್ ಎನ್.ಜಯಕುಮಾರ್ ಹಾಗೂ ಸಿಬ್ಬಂದಿ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.