ಹನೂರು:ಪಟ್ಟಣದ ಜಿ.ವಿ.ಗೌಡ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಸಸಿ ನಡುವುದರ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಡಯಟ್‌ನ ಹಿರಿಯ ಉಪನ್ಯಾಸಕ ನಾಗರಾಜು ಮಾತನಾಡಿ, ಗಿಡ, ಮರಗಳು ಆಮ್ಲಜನಕ ನೀಡುವುದರ ಜತೆಗೆ ಹೂವು, ಹಣ್ಣು ನೀಡುತ್ತವೆ. ಉತ್ತಮ ಪರಿಸರಕ್ಕೆ ಕಾರಣವಾಗಿದೆ. ಆದ್ದರಿಂದ ಪರಿಸರವನ್ನು ಉಳಿಸಿ, ಬೆಳೆಸಬೇಕಾದುದ್ದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಶಿಕ್ಷಕ ಶಾಂತರಾಜು ಮಾತನಾಡಿ, ಮರವಿದ್ದರೆ ಮಳೆ, ಮಳೆಯಿದ್ದರೆ ಬೆಳೆ. ಇಲ್ಲದಿದ್ದರೆ ಬರಗಾಲ ನಮ್ಮನ್ನು ಆವರಿಸಿ ಕುಡಿಯಲು ನೀರು ಹಾಗೂ ಆಹಾರ ಸಿಗದೆ ವಲಸೆ ಹೋಗಬೇಕಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಗಿಡ ನೆಟ್ಟು ಪರಿಸರವನ್ನು ಸಂರಕ್ಷಿಸುವಂತೆ ಸಲಹೆ ನೀಡಿದರು.
ಮುಖ್ಯಶಿಕ್ಷಕ ಮಹದೇವ, ಶಿಕ್ಷಕರಾದ ಲೋಕೇಶ್, ಶ್ರೀನಿವಾಸನಾಯ್ಡು, ರವಿ, ಗೌತಮಿ ಹಾಗೂ ವಿದ್ಯಾರ್ಥಿಗಳು ಇದ್ದರು.