ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ವಸ್ತುಗಳ ತೆರವು

ಶಾಗ್ಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾವೇರಿ ವನ್ಯಜೀವಿ ವಿಭಾಗದ ಅರಣ್ಯ ಪ್ರದೇಶದಲ್ಲಿ ಭಕ್ತರು ಬಿಸಾಡಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿದರು.
ಶಾಗ್ಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾವೇರಿ ವನ್ಯಜೀವಿ ವಿಭಾಗದ ಅರಣ್ಯ ಪ್ರದೇಶದಲ್ಲಿ ಭಕ್ತರು ಬಿಸಾಡಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿದರು.
Published on
ಹನೂರು: ತಾಲೂಕಿನ ಶಾಗ್ಯ ಬಳಿಯ ಕಾವೇರಿ ವನ್ಯಜೀವಿ ವಿಭಾಗದ ಅರಣ್ಯ ಪ್ರದೇಶದಲ್ಲಿ ಭಕ್ತರು ಬಿಸಾಡಿದ್ದ ಪ್ಲಾಸ್ಟಿಕ್ ವಸ್ತುಗಳನ್ನು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಗುರುವಾರ ತೆರವುಗೊಳಿಸಿದರು.
ಮಹಾ ಶಿವರಾತ್ರಿ ಜಾತ್ರೆ ಹಿನ್ನೆಲೆ ಕಳೆದ ವಾರ ಲಕ್ಷಾಂತರ ಭಕ್ತರು ಕನಕಪುರ ಸಂಗಮದ ಕಾವೇರಿ ನದಿ ದಾಟಿ ತಾಲೂಕಿನ ಶಾಗ್ಯದ ಬಸವನಕಡದ ಮೂಲಕ ಮ.ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ್ದರು. ಈ ವೇಳೆ ಅರಣ್ಯ ಇಲಾಖೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡದಂತೆ ಅಲ್ಲಲ್ಲಿ ಸೂಚನಾ ಫಲಕ ಅಳವಡಿಸುವುದರ ಜತೆಗೆ ಭಕ್ತರಲ್ಲಿ ಜಾಗೃತಿ ಮೂಡಿಸಲಾಗಿತ್ತು. ಜತೆಗೆ ಅರಣ್ಯ ಪ್ರದೇಶದ ಮಾರ್ಗದಲ್ಲಿ ಹಸಿರು ಸೊಪ್ಪಿನಿಂದ ಕಸದ ಬುಟ್ಟಿಯನ್ನು ಸಿದ್ಧಪಡಿಸಲಾಗಿತ್ತು. ಆದರೂ ಭಕ್ತರು ಅರಣ್ಯ ಪ್ರದೇಶದ ಎಲ್ಲೆಂದರಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲಿ, ಕೈಚೀಲ ಹಾಗೂ ಇನ್ನಿತರೆ ಪ್ಲಾಸ್ಟಿಕ್ ವಸ್ತುಗಳನ್ನು ಬಿಸಾಡಿದ್ದರು.
ಈ ಹಿನ್ನೆಲೆಯಲ್ಲಿ ಶಾಗ್ಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಜತೆ ತೆರಳಿ ಅಲ್ಲಲ್ಲಿ ಬಿಸಾಡಿದ್ದ ಪ್ಲಾಸ್ಟಿಕ್ ವಸ್ತುಗಳನ್ನು ತೆರೆವುಗೊಳಿಸಿದರು.
ಈ ವೇಳೆ ಡಿಆರ್‌ಎಫ್‌ಒ ರಮೇಶ್ ಮಾತನಾಡಿ, ಅರಣ್ಯ ಹಾಗೂ ವನ್ಯಜೀವಿಗಳು ಮನುಕುಲದ ಸಂಪತ್ತು. ಇದರ ಸಂರಕ್ಷಣೆ ಎಲ್ಲರ ಆದ್ಯ ಕರ್ತವ್ಯ. ಆದರೆ ಜಾಗೃತಿ ಮೂಡಿಸಿದ್ದರೂ ಮಾದಪ್ಪನ ಭಕ್ತರು ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಿಸಾಡಿರುವುದು ಬೇಸರದ ಸಂಗತಿ. ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಿಸಾಡುವುದು ವನ್ಯಜೀವಿಗಳ ಜೀವಕ್ಕೆ ಸಂಚಕಾರವನ್ನು ತರುತ್ತದೆ. ಇದನ್ನು ಮನಗಂಡು ಶಾಲೆಯ ಮಕ್ಕಳು ಪ್ಲಾಸ್ಟಿಕ್ ವಸ್ತುಗಳನ್ನು ತೆರೆವುಗೊಳಿಸಲು ಕೈಜೋಡಿಸಿರುವುದು ನಿಜಕ್ಕೂ ಸಂತಸದ ಸಂಗತಿ ಎಂದರು.
ಮುಖ್ಯ ಶಿಕ್ಷಕ ಮಹಾದೇವ, ಶಿಕ್ಷಕರಾದ ಪ್ರಕಾಶ್, ಸಚಿನ್, ನಾಗೇಂದ್ರ, ಮಹಾದೇವ್, ನಾಗೇಂದ್ರ, ಚೈತ್ರಾ, ಶಿವರಾಜು, ಅರಣ್ಯ ಇಲಾಖೆಯ ಸಿಬ್ಬಂದಿ ಮಹಾಂತೇಶ್, ವಿವೇಕಾನಂದ, ಆನಂದ್, ಮಹೇಂದ್ರ, ಸುರೇಶ್ ಇನ್ನಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net