ಜನ್ಮದಿನದಂದು ಒಂದೊಂದು ಗಿಡ ನೆಟ್ಟು ಪೋಷಿಸಿ

ರಾಮಾಪುರ ಜೆಎಸ್‌ಎಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು. ಮಧುಕುಮಾರ್, ಶ್ರೀಕಂಠ, ಗೀತಾ, ಕುಮಾರಸ್ವಾಮಿ ಇತರರಿದ್ದರು.
ರಾಮಾಪುರ ಜೆಎಸ್‌ಎಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು. ಮಧುಕುಮಾರ್, ಶ್ರೀಕಂಠ, ಗೀತಾ, ಕುಮಾರಸ್ವಾಮಿ ಇತರರಿದ್ದರು.
Published on
ಹನೂರು: ತಾಲೂಕಿನ ರಾಮಾಪುರ ಜೆಎಸ್‌ಎಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಶಾಲಾ ಆವರಣದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮಧುಕುಮಾರ್ ಅವರು ಸಸಿ ನೆಟ್ಟು ನೀರೆರೆದು ಮಾತನಾಡಿ, ಉತ್ತಮ ಪರಿಸರ ಉತ್ತಮ ಆರೋಗ್ಯವನ್ನು ತಂದು ಕೊಡುತ್ತಿದೆ. ಆದ್ದರಿಂದ ಪರಿಸರವನ್ನು ಸಂರಕ್ಷಿಸುವುದು ಎಲ್ಲರ ಆದ್ಯ ಕರ್ತವ್ಯ. ಈ ದೆಸೆಯಲ್ಲಿ ವಿದ್ಯಾರ್ಥಿಗಳು ಜನ್ಮ ದಿನದಂದು ಒಂದೊಂದು ಗಿಡವನ್ನು ನೆಟ್ಟು ಪೋಷಿಸುವುದರ ಮೂಲಕ ಉತ್ತಮ ಪರಿಸರವನ್ನು ನಿರ್ಮಿಸುವಂತೆ ತಿಳಿಸಿದರು.
ಮುಖ್ಯ ಶಿಕ್ಷಕ ಶ್ರೀಕಂಠ ಅವರು ಪರಿಸರ ಸಮತೋಲನ, ಹವಾಮಾನ ಹಾಗೂ ಅರಣ್ಯದ ಮಹತ್ವವನ್ನು ತಿಳಿಸಿಕೊಟ್ಟರು. ಬಳಿಕ ಆಯೋಜಿಸಿದ್ದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.
ಶಿಕ್ಷಕರಾದ ಗೀತಾ, ಕುಮಾರಸ್ವಾಮಿ, ಮಾರ್ಗರೇಟ್, ಪುಟ್ಟಪ್ಪ, ಪ್ರಸಾದ್ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net