ಆತಂಕ ಉಂಟು ಮಾಡಿದ ಒಂಟಿ ಸಲಗ

ಹನೂರು : ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ಕೋಣನಕೆರೆ  ತಾಳುಬೆಟ್ಟ ಮಾರ್ಗದ ರಸ್ತೆಯಲ್ಲಿ ಭಾನುವಾರ ಒಂಟಿ ಸಲಗವೊಂದು ಕಾಣಿಸಿಕೊಂಡು ಭಕ್ತರಲ್ಲಿ ಕೆಲಕಾಲ ಆತಂಕವನ್ನು ಉಂಟು ಮಾಡಿತು.
ಹನೂರು : ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ಕೋಣನಕೆರೆ ತಾಳುಬೆಟ್ಟ ಮಾರ್ಗದ ರಸ್ತೆಯಲ್ಲಿ ಭಾನುವಾರ ಒಂಟಿ ಸಲಗವೊಂದು ಕಾಣಿಸಿಕೊಂಡು ಭಕ್ತರಲ್ಲಿ ಕೆಲಕಾಲ ಆತಂಕವನ್ನು ಉಂಟು ಮಾಡಿತು.
Published on
ಹನೂರು : ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ಕೋಣನಕೆರೆ ತಾಳುಬೆಟ್ಟ ಮಾರ್ಗದ ರಸ್ತೆಯಲ್ಲಿ ಭಾನುವಾರ ಒಂಟಿ ಸಲಗವೊಂದು ಕಾಣಿಸಿಕೊಂಡು ಭಕ್ತರಲ್ಲಿ ಕೆಲಕಾಲ ಆತಂಕವನ್ನು ಉಂಟು ಮಾಡಿತು.
ಈ ಮಾರ್ಗವು ಮಲೆಮಹದೇಶ್ವರ ವನ್ಯಜೀವಿ ಧಾಮದ ನಡುವೆ ಹಾದು ಹೋಗಿದ್ದು, ಹಲವು ತಿಂಗಳಿನಿಂದಲೂ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆ. ಜತೆಗೆ ತಾಳುಬೆಟ್ಟ ಮ.ಬೆಟ್ಟದ ಮಾರ್ಗದಲ್ಲಿ ಇತ್ತೀಚೆಗೆ ಚಿರತೆಗಳು ಪ್ರತ್ಯಕ್ಷವಾಗುತ್ತಿದ್ದು, ಭಕ್ತರ ಆತಂಕಕ್ಕೆ ಕಾರಣವಾಗಿದೆ.
ಇದರ ದೃಶ್ಯಗಳನ್ನು ಭಕ್ತರು ಸಾಮಾಜಿಕ ತಾಲ ತಾಣದಲ್ಲಿ ಹರಿ ಬಿಟ್ಟಿದ್ದು, ಭಕ್ತರು ಎಚ್ಚರಿಕೆಯಿಂದ ತೆರಳುವಂತೆ ಸಲಹೆ ನೀಡಿದ್ದಾರೆ. ಹೀಗಿರುವಾಗ ಭಾನುವಾರ ಬೆಳಗ್ಗೆ ಕೋಣನಕೆರೆ ಸಮೀಪದ ತಿರುವಿನಲ್ಲಿ ಒಂಟಿ ಸಲಗವೊಂದು ಕಾಣಿಸಿಕೊಂಡು ರಸ್ತೆ ದಾಟುತ್ತಿತ್ತು. ಈ ವೇಳೆ ಮ.ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಭಕ್ತರು
ಭಯ ಬಿದ್ದರು.
ಆನೆ ರಸ್ತೆ ದಾಟಿ ಅರಣ್ಯ ಪ್ರದೇಶದತ್ತ ತೆರಳುತ್ತಿದ್ದಂತೆ ಭಕ್ತರು ಉಘೇ ಮಾದಪ್ಪ, ಉಘೇ ಮಾದೇಶ್ವರ ಜಯಘೋಷವನ್ನು ಕೂಗಿದರು. ಕಾಡಾನೆ ಅರಣ್ಯ ಪ್ರದೇಶದೊಳಗೆ ತೆರಳಿದ ಬಳಿಕ ಕಾಲ್ನಡಿಗೆ ಭಕ್ತರು ಹಾಗೂ ವಾಹನ ಸವಾರರು ನಿಟ್ಟುಸಿರು ಬಿಟ್ಟು ಪಯಣ ಮುಂದುವರಿಸಿದರು. ಇದರ ದೃಶ್ಯವನ್ನು ಕಾಲ್ನಡಿಗೆಯ ಭಕ್ತರೊಬ್ಬರೂ ಸಾಮಾಜಿಕ ಜಾಲ ತಾಣದಲ್ಲಿ ಹರಿ ಬಿಟ್ಟಿದ್ದಾರೆ.
ಕ್ರಮವಹಿಸುವಂತೆ ಒತ್ತಾಯ:
ಈಗಾಗಲೇ ವಿವಿಧೆಡೆಯಿಂದ ಭಕ್ತರು ಮ.ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದಾರೆ. ಜತೆಗೆ ಮುಂದಿನ ತಿಂಗಳು ಮ.ಬೆಟ್ಟದಲ್ಲಿ ನಡೆಯುವ ಮಹಾ ಶಿವರಾತ್ರಿ ಜಾತ್ರೆಗೆ ಲಕ್ಷಾಂತರ ಭಕ್ತರು ಕಾವೇರಿ ನದಿಯನ್ನು ದಾಟಿ ಪಾದಯಾತ್ರೆಯ ಮೂಲಕ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ತಾಳುಬೆಟ್ಟದ ಮಾರ್ಗದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದು ಹೆಚ್ಚಾಗಿದೆ. ಇತ್ತ ಕೌದಳ್ಳಿ ಮಾರ್ಗದಲ್ಲಿ ಆಗ್ಗಾಗ್ಗೆ ಕಾಡಾನೆಗಳು ರಸ್ತೆ ಬದಿಗೆ ಆಗಮಿಸುತ್ತಿವೆ ಇದರಿಂದ ಮುಂದಿನ ದಿನಗಳಲ್ಲಿ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇದೆ. ಆದ್ದರಿಂದ ಅರಣ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಮುತುರ್ವಜಿ ವಹಿಸಿ ಕಾಡು ಪ್ರಾಣಿಗಳು ಕಾಣಿಸಿಕೊಳ್ಳುವ ಸ್ಥಳದಲ್ಲಿ ಸಿಬ್ಬಂದಿಯನ್ನು ನಿಯೋಜಿಸುವುದರ ಮೂಲಕ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಕ್ರಮವಹಿಸುವಂತೆ ಭಕ್ತರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net