ಇದಕ್ಕೂ ಮುನ್ನಾ ಕ್ರೀಡಾ ಧ್ವಜಾರೋಹಣ ನೆರವೇರಿಸಲಾಯಿತು. ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಪಥ ಸಂಚಲನ ನಡೆಸುವುದರ ಮೂಲಕ ಗಣ್ಯರಿಗೆ ಗೌರವ ವಂದನೆ ಸಲ್ಲಿಸಿದರು. ಬಿಇಒ ಮಹೇಶ್ ಕ್ರೀಡಾಜ್ಯೋತಿ ಬೆಳಗಿಸಿದರು. ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು. ಪಪಂ ಉಪಾಧ್ಯಕ್ಷ ಆನಂದಕುಮಾರ್, ಪಿಎಸಿಸಿ ನಿರ್ದೇಶಕ ಮಂಜೇಶ್, ಬಿಆರ್‌ಸಿ ವೆಂಕಟೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ಇದ್ದರು.