ಬಾಯಿ ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರ

ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ  ಸ್ತನ, ಗರ್ಭಕಂಠ ಹಾಗೂ ಬಾಯಿ ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರವನ್ನು ಜಿಲ್ಲಾಧಿಕಾರಿ ಶ್ರೀರೂಪಾ ಉದ್ಘಾಟಿಸಿದರು. ತಹಸೀಲ್ದಾರ್ ಬಸವರಾಜು, ಪ್ರಭಾರ ಡಿಎಚ್‌ಒ ಡಾ.ರಾಜೇಶ್ ಇತರರು ಪಾಲ್ಗೊಂಡಿದ್ದರು.

Published on
ಕೊಳ್ಳೇಗಾಲ: ತಾಲೂಕಿನ ಸತ್ತೇಗಾಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿದ್ವಾಯಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆ್ ಆಂಕಾಲಜಿಯ ಪಿಂಕ್ ಬಸ್ ವತಿಯಿಂದ ಮಂಗಳವಾರ ಆಯೋಜಿಸಿದ್ದ ಸ್ತನ, ಗರ್ಭಕಂಠ ಹಾಗೂ ಬಾಯಿ ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರವನ್ನು ಜಿಲ್ಲಾಧಿಕಾರಿ ಶ್ರೀರೂಪಾ ಉದ್ಘಾಟಿಸಿದರು.
ಬಳಿಕ ತಪಾಸಣಾ ಕಾರ್ಯ, ಆರೋಗ್ಯ ಇಲಾಖೆಯ ಸಿದ್ಧತೆಗಳು ಹಾಗೂ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು, ಕ್ಯಾನ್ಸರನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದು ಜೀವ ಉಳಿಸುವ ಪ್ರಮುಖ ಹೆಜ್ಜೆಯಾಗಿದೆ. ಮಹಿಳೆಯರು ಉಚಿತ ತಪಾಸಣೆಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು. ಆರಂಭಿಕ ತಪಾಸಣೆ ಆರೋಗ್ಯಕರ ಬದುಕಿನ ಭರವಸೆ. ಪ್ರತಿಯೊಬ್ಬ ಮಹಿಳೆಯೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಈ ಉಚಿತ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯವನ್ನು ಸುರಕ್ಷಿತವಾಗಿರಿಸಿಕೊಳ್ಳಬೇಕು ಎಂದರು.
ತಹಸೀಲ್ದಾರ್ ಬಸವರಾಜು, ಪ್ರಭಾರ ಡಿಎಚ್‌ಒ ಡಾ.ರಾಜೇಶ್ ಮತ್ತು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net