ಗುಂಡ್ಲುಪೇಟೆಯಲ್ಲಿ ಮದ್ಯವರ್ಜನ ಶಿಬಿರದ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.
Published on:
Copied
Follow Us
ಗುಂಡ್ಲುಪೇಟೆ:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪಟ್ಟಣದ ಆದಿವಾಸಿ ಸಾಂಸ್ಕೃತಿಕ ಭವನದಲ್ಲಿ ನಡೆಯುತ್ತಿರುವ ಮದ್ಯವರ್ಜನ ಶಿಬಿರದ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.
ಭವನದಲ್ಲಿ ಶಿಬಿರಾರ್ಥಿಗಳಿಗೆ ರಕ್ತದೊತ್ತಡ, ಮಧುಮೇಹ, ಹಿಮಗ್ಲೋಬಿನ್ ಇತರೆ ಆರೋಗ್ಯದ ಸ್ಥಿತಿಗತಿ ಬಗ್ಗೆ ತಪಾಸಣೆ ಮಾಡಿಸಲಾಯಿತು. ಕಾರ್ಯಕ್ರಮಕ್ಕೆ ತಾಲೂಕಿನ ವೈದ್ಯಾಧಿಕಾರಿ ಡಾ.ಅಲೀಂ ಪಾಷಾ ಚಾಲನೆ ನೀಡಿದರು.
ಗುಂಡ್ಲುಪೇಟೆಯ ಕಬ್ಬಹಳ್ಳಿ ಸಾಹುಕಾರ್ ಕೆ.ಸಿ.ಸುಬ್ಬಣ್ಣ ಸಾರ್ವಜನಿಕ ಆಸ್ಪತ್ರೆಯ ಶುಶ್ರೂಷಕಿಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿಬಿರದ ಯೋಜನಾಧಿಕಾರಿ ಮುಕೇಶ್ ಇತರರು ಇದ್ದರು.