ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಆರೋಗ್ಯ ಸಂಸ್ಥೆ (ಐಪಿಎಚ್) ತಾಂತ್ರಿಕ ನಿರ್ವಹಣೆಯೊಂದಿಗೆ ಹೆಲ್ತ್ ನ್ಯಾವಿಗೇಟರ್‌ಗಳನ್ನಾಗಿ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಚಾಮರಾಜನಗರ ಮತ್ತು ಯಳಂದೂರು ತಾಲೂಕು ಆಸ್ಪತ್ರೆಗಳಲ್ಲಿನ ನೇಮಕಾತಿ ಪ್ರಕ್ರಿಯೆಯು ಜಿಲ್ಲಾಧಿಕಾರಿ ಅಧ್ಯಕ್ಷತೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಐಪಿಎಚ್ ಸದಸ್ಯರು, ಸಮುದಾಯದ ಇಬ್ಬರು ಇರುವ ಕಮಿಟಿಯ ನೇತೃತ್ವದಲ್ಲಿ ನಡೆದಿದೆ. ವಿದ್ಯಾರ್ಹತೆ ಮತ್ತು ಅನುಭವವನ್ನು ಆಧರಿಸಿ ನೇಮಕ ಮಾಡಿಕೊಳ್ಳಲಾಗಿದೆ. ಹೆಲ್ತ್ ನ್ಯಾವಿಗೇಟರ್‌ಗಳು ಹಾಡಿ, ಪೋಡುಗಳಿಂದ ಬರುವ ರೋಗಿಗಳ ಮೇಲ್ವಿಚಾರಣೆ ಮಾಡಲಿದ್ದಾರೆ. ಆಸ್ಪತ್ರೆಯಲ್ಲಿ ಯಾವ ವೈದ್ಯರ ಬಳಿ ಚಿಕಿತ್ಸೆ ಪಡೆಯಬೇಕು. ಔಷಧಿಗಳನ್ನು ಎಲ್ಲಿ ತರಬೇಕು ಎಂಬಿತ್ಯಾದಿ ವಿಷಯಗಳನ್ನು ಬುಡಕಟ್ಟು ಸಮುದಾಯದವರಿಗೆ ತಿಳಿಸಿಕೊಡಲಿದ್ದಾರೆ.